ಮಂಡ್ಯ: ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆ ಅಭಿವೃದ್ಧಿಗೆ ಕಡೆಗೂ ಕಾಲ ಕೂಡಿ ಬಂದಿದೆ.
ಮಂಡ್ಯ ಟು ಶಿರಾ ಹೆದ್ದಾರಿ ಕಾಮಗಾರಿಗೆ ಸಚಿವ ಚಲುವರಾಯಸ್ವಾಮಿ ಅವರು ಭೂಮಿ ಪೂಜೆ ನೆರವೇರಿಸಿದ್ದಾರೆ.
ಕೋರ್ಟ್ ವ್ಯಾಜ್ಯದಿಂದ ದಶಕಗಳಿಂದ ಸದರಿ ಹೆದ್ದಾರಿ ಅಭಿವೃದ್ಧಿಯಿಂದ ವಂಚಿತವಾಗಿತ್ತು.
ಸುಮಾರು 11 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಭೂಮಿ ಪೂಜೆ ನೆರವೇರಿಸಿದ್ದಾರೆ.
ಶಾಸಕ ಗಣಿಗ ರವಿಕುಮಾರ್, ಅಧಿಕಾರಿ ವರ್ಗ ಈ ಸಂದರ್ಭ ಉಪಸ್ಥಿತರಿದ್ದರು.