ಧಾರವಾಡ : ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಇಂದು (ನ.21) ಬೆಳಿಗ್ಗೆ ಶ್ರೀ ಕನಕದಾಸರ ಜಯಂತಿ ಆಚರಣೆಯ ಕುರಿತು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಜರುಗಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶ್ರೀ ಕನಕದಾಸರ ಜಯಂತಿ ಆಚರಣೆಯನ್ನು ನ.30 ರಂದು ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಸಭಾಭವನದಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಪ್ರತಿವರ್ಷದಂತೆ ಶ್ರೀ ಕನಕದಾಸ ಜಯಂತಿ ಆಚರಣೆಯನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಿ, ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಸಮುದಾಯಗಳ ಮುಖಂಡರಾದ ಡಾ.ಲೋಹಿತ ನಾಯ್ಕರ, ಪ್ರಕಾಶ ಉಡಿಗೇರಿ, ಬಸವರಾಜ ಕಟಿಗಿ, ಚಂದ್ರಕಲಾ ಕೋಟಬಾಗಿ, ರವಿ ಮಾಳಿಗೇರ, ಜೆ.ಬಿ.ಕಂಬಳಿ, ರವಿ ಐರಾಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.