ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿ ಗಾಯಗೊಂಡಿರುವ ಘಟನೆ ಇಂದು ಬುಧವಾರ ವೀವರ್ಸ್ ಕಾಲೊನಿಯ ಮಾರುತಿ ಬಡಾವಣೆಯಲ್ಲಿ ಸಂಭವಿಸಿತು. ಮಾರ್ಟಿನ್ ಎಂಬವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ವಾಸವಿದ್ದ ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್ (೩೨), ನಾಜಿಯಾ (೨೨), ಇರ್ಫಾನ್ (೨೧), ಗುಲಾಬ್ (೧೮) ಹಾಗು ಶಹಜಾದ್ (೯) ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ ವಿದ್ಯುತ್ ಬಲ್ಬ್ ಸ್ವಿಚ್ ಆನ್ ಮಾಡಿದಾಗ ಆಡುಗೆ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಕಿಟಕಿ, ಬಾಗಿಲುಗಳು ಛಿದ್ರಗೊಂಡಿವೆ. ಮನೆಯ ಮುಂಭಾಗ ನಿಲ್ಲಿಸಿದ್ದ ಕಾರಿನ ಗಾಜುಗಳು ಸಿಡಿದಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.