Sunday, April 20, 2025
Google search engine

Homeರಾಜ್ಯಗ್ರಾಮೀಣ ಮಕ್ಕಳೂ KAS-PSI ಪರೀಕ್ಷೆಯಲ್ಲಿ ಪಾಸಾಗಲು ವೀಣಾ ಕಾಶಪ್ಪನವರ್ ಫೌಂಡೇಶನ್ ನೆರವಾಗಲಿದೆ: ಸಿಎಂ ಸಿದ್ದರಾಮಯ್ಯ ಅಭಯ

ಗ್ರಾಮೀಣ ಮಕ್ಕಳೂ KAS-PSI ಪರೀಕ್ಷೆಯಲ್ಲಿ ಪಾಸಾಗಲು ವೀಣಾ ಕಾಶಪ್ಪನವರ್ ಫೌಂಡೇಶನ್ ನೆರವಾಗಲಿದೆ: ಸಿಎಂ ಸಿದ್ದರಾಮಯ್ಯ ಅಭಯ

ಬಾಗಲಕೋಟೆ: ವೀಣಾ ಕಾಶಪ್ಪನವರಿಗೆ ರಾಜಕೀಯವಾಗಿ ಒಳ್ಳೆ ಭವಿಷ್ಯ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಯ ನೀಡಿದರು.

ಬಾಗಲಕೋಟೆಯ ವೀಣಾ ವಿ ಕಾಶಪ್ಪನವರ್ ಫೌಂಡೇಶನ್ ಹಮ್ಮಿಕೊಂಡಿದ್ದ ಉಚಿತ ಕೆ.ಎ.ಎಸ್ ಮತ್ತು ಪಿ.ಎಸ್.ಐ ಪರೀಕ್ಷೆಯ ತರಬೇತಿ ಕೇಂದ್ರ ಮತ್ತು ಅಕಾಡೆಮಿಯನ್ನು ಉದ್ಘಾಟಿಸಿದರು.

ಗ್ರಾಮೀಣ ಮಕ್ಕಳೂ KAS-PSI ಪರೀಕ್ಷೆಯಲ್ಲಿ ಪಾಸಾಗಲು ವೀಣಾ ಕಾಶಪ್ಪನವರ್ ಫೌಂಡೇಶನ್ ನೆರವಾಗಲಿದೆ. ಈಗ 200 ಅಭ್ಯರ್ಥಿಗಳಿಂದ ಆರಂಭವಾಗಿ 1500 ವಿದ್ಯಾರ್ಥಿಗಳಿಗೆ ಪ್ರತೀ ವರ್ಷ ವೀಣಾ ಕಾಶಪ್ಪನವರ್ ಫೌಂಡೇಷನ್ ನೆರಳಾಗಲಿದೆ ಎಂದು ಮುಖ್ಯಮಂತ್ರಿಗಳು ಮೆಚ್ಚುಗೆ ಸೂಚಿಸಿದರು.

ಸಾವಿರಾರು ವಿದ್ಯಾರ್ಥಿಗಳ KAS-IAS ಕನಸನ್ನು, ಅವಕಾಶ ವಂಚಿತ ವಿದ್ಯಾರ್ಥಿಗಳ PSI-IPS ಆಗುವ ಕನಸನ್ನು ನನಸು ಮಾಡುವ ಮೂಲಕ ಸಮಾಜದ ಋಣ ತೀರಿಸುವ ಕೆಲಸದಲ್ಲಿ ಕಾಶಪ್ಪನವರ್ ದಂಪತಿ ತೊಡಗಿದ್ದಾರೆ. ಇವರಿಗೆ ನಿಮ್ಮ ಆಶೀರ್ವಾದ ಇರಲಿ ಎಂದು ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆಯಾಗಿ ಜಿಲ್ಲೆ ನೆನಪಿಡುವ ಕೆಲಸಗಳನ್ನು ವೀಣಾ ಅವರು ಮಾಡಿದ್ದಾರೆ. ಇವರ ಸಮಾಜಮುಖಿ ಕೆಲಸಗಳು ಈ KAS ಅಕಾಡೆಮಿ ಮೂಲಕ ಇನ್ನಷ್ಟು ವಿಸ್ತಾರವಾಗುತ್ತಿದೆ ಎಂದು ವಿವರಿಸಿದರು.

ಪ್ರತಿಭೆ ಪ್ರತಿಯೊಬ್ಬರಲ್ಲೂ ಇರುತ್ತದೆ. ಈ ಪ್ರತಿಭೆಗೆ ಅವಕಾಶಗಳು ಬೇಕು. ಆ ಅವಕಾಶವನ್ನು ಸೃಷ್ಟಿಸುವ ಕೆಲಸವನ್ನು ವೀಣಾ ಕಾಶಪ್ಪ ದಂಪತಿ ಯಶಸ್ವಿಯಾಗಿ ಮಾಡುತ್ತಿದ್ದಾರೆ ಎಂದರು.

ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ‌ ಶ್ರೀಗಳು, ಯಲ್ಲಾಲಿಂಗ ಶ್ರೀಮಠದ ಡಾ.ಮುರುಘರಾಜೇಂದ್ರ ಶ್ರೀಗಳು, ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಕೂಡಲಸಂಗಮ‌ ಪಂಚಮಸಾಲಿ ಜಗದ್ಗುರು ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು, ವಿಜಯಪುರ ಗಾಣಿಗರ ಗುರುಪೀಠದ ಡಾ.ಜಯಬಸವ ಶ್ರೀಗಳು, ಇಳಕಲ್ಲ ಚಿತ್ತರಗಿ ಸಂಸ್ಥಾನಮಠದ ಗುರುಮಹಾಂತ ಶ್ರೀಗಳು, ಮಾದರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು, ಚಿತ್ತಾಪುರ ಉಪ್ಪಾರ ಮಠದ ಭಗೀರಥಾನಂದಪುರಿ ಮಹಾಸ್ವಾಮಿಗಳು, ಸಜ್ಜಾದೇ ನಶೀನ ಇಳಕಲ್ ನ ಹಜರತ್ ಸೈಯದ್ ಫೈಸಲ್ ಪಾಶಾ ಸಾಹೇಬರು, ಬಿಲ್ವಾಶ್ರಮ ಹಿರೇಮಠದ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ನಿರಂತರ ದಾಸೋಹ ಮಠ ಸಿದ್ದನಕೊಳ್ಳದ ಶಿವಕುಮಾರ ಶ್ರೀಗಳು, ಬಂಜಾರ ಶಕ್ತಿಪೀಠದ ಕುಮಾರ ಮಹಾರಾಜರು ದಿವ್ಯ ಸಾನಿಧ್ಯ ವಹಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಎಚ್.ವಾಯ್.ಮೇಟಿ ವಹಿಸಿದ್ದರು.

ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ ತಂಗಡಗಿ, ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ, ಹುನಗುಂದ ಶಾಸಕರಾದ ವಿಜಯಾನಂದ ಎಸ್ ಕಾಶಪ್ಪನವರ್ ಸೇರಿ ಹಲವಾರು ಸಚಿವರು ಮತ್ತು  ಶಾಸಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular