Sunday, April 20, 2025
Google search engine

Homeರಾಜ್ಯಸುದ್ದಿಜಾಲಪುರಾತನ ಇತಿಹಾಸ ಪ್ರಸಿದ್ಧ ಸ್ಥಳಗಳನ್ನು ಸಂರಕ್ಷಿಸಬೇಕು: ಇಓ ಎಂ.ಎಸ್ ವೀಣಾ

ಪುರಾತನ ಇತಿಹಾಸ ಪ್ರಸಿದ್ಧ ಸ್ಥಳಗಳನ್ನು ಸಂರಕ್ಷಿಸಬೇಕು: ಇಓ ಎಂ.ಎಸ್ ವೀಣಾ

ಮಂಡ್ಯ: ಪ್ರಾಚೀನ ಇತಿಹಾಸದ ಮೇಲೆ ಬೆಳಕು ಚೆಲ್ಲುವಂತಹ ಸ್ಮಾರಕಗಳನ್ನು ಸಂರಕ್ಷಣೆ ಮಾಡುವ ಸದುದ್ದೇಶದಿಂದ ಪ್ರಾಚೀನ ಸಂರಕ್ಷಣಾ ಅಭಿಯಾನವನ್ನು ಮಾನ್ಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳ ನಿರ್ದೇಶನದಂತೆ ತಾಲ್ಲೂಕಿನ ಎಲ್ಲಾ ೪೬ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಟ ಒಂದು ಸ್ಮಾರಕಗಳನ್ನು ಗುರುತಿಸಿ, ನಮ್ಮ ನಡಿಗೆ ಪರಂಪರೆಯ ಕಡೆಗೆ ಎಂಬ ಘೋಷ ವಾಕ್ಯದೊಂದಿಗೆ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದು ಕಾರ್ಯನಿರ್ವಾಹಕಾಧಿಕಾರಿಗಳಾದ ಎಂ.ಎಸ್ ವೀಣಾ ಅವರು ತಿಳಿಸಿದರು.

ಮಂಡ್ಯ ತಾಲ್ಲೂಕಿನ ಹನಕೆರೆ ಗ್ರಾಮ ಪಂಚಾಯಿತಿಯ, ತುಂಬಕೆರೆ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಶಾಂತೇಶ್ವರ ದೇವಾಲಯದಲ್ಲಿ “ನಮ್ಮ ನಡೆ ನಮ್ಮ ಪರಂಪರೆ ಕಡೆ, ಬನ್ನಿ ನಮ್ಮ ಪರಂಪರೆ ಉಳಿಸೋಣ” ಎಂಬ ಘೋಷ ವಾಕ್ಯದೊಂದಿಗೆ ಅಭಿಯಾನಕ್ಕೆ ಸಂಬಂಧಿಸಿದಂತೆ ಶಾಲಾ ಮಕ್ಕಳೊಂದಿಗೆ ಶ್ರಮದಾನ ಕೈಗೊಳ್ಳುವ ಮೂಲಕ ಇತಿಹಾಸ ಪ್ರಸಿದ್ಧ ದೇಗುಲದ ಬಳಿ ಸ್ಚಚ್ಚತಾ ಕಾರ್ಯಕ್ಕೆ ಕೈ ಜೋಡಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪುರಾತನ ಇತಿಹಾಸ ಪ್ರಸಿದ್ಧ ಸ್ಥಳಗಳನ್ನು ಸಂರಕ್ಷಿಸಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮನೋಜ್ ಕುಮಾರ್, ಉಪಾಧ್ಯಕ್ಷರು, ಸದಸ್ಯರುಗಳು, ಪಿಡಿಓ ಭಾಗ್ಯ, ಕಾರ್ಯದರ್ಶಿ ಉಮೇಶ್, ಟಿಸಿ ರವಿಕುಮಾರ್, ಐಇಸಿ ಆಶಾ, ಟಿಎಇಗಳಾದ ಭರತ್, ನವೀನ್, ಮನು, ಸುರೇಶ್, ಬಿಎಪ್ಟಿ ರವಿ, ಶಾಲಾ ಮಕ್ಕಳು, ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular