Sunday, April 20, 2025
Google search engine

Homeಸ್ಥಳೀಯಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಡಿ.9ಕೊನೆಯ ದಿನ

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಡಿ.9ಕೊನೆಯ ದಿನ

ಚಿತ್ರದುರ್ಗ: ವಿಧಾನಪರಿಷತ್ತಿನ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ನೊಂದಣಿ ನಿಯಮಗಳು, ೧೯೬೦ರ ನಿಯಮಾವಳಿಗನುಸಾರವಾಗಿ ಸಿದ್ದಪಡಿಸಿರುವ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಬಿಡುಗಡೆಗೊಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ ಸಂಬಂಧ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಿ, ಮಾತನಾಡಿದ ಜಿಲ್ಲಾಧಿಕಾರಿಗಳು, ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಗುರುವಾರದಂದು ಪ್ರಕಟಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ತಹಶೀಲ್ದಾರ್‍ಗಳ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಕಚೇರಿ ವೇಳೆಯಲ್ಲಿ ಪರಿಶೀಲನೆಗೆ ದೊರೆಯುತ್ತದೆ ಎಂದರು.

ಮತದಾರರ ಪಟ್ಟಿಯ ತಯಾರಿಕೆಗಾಗಿ ೨೦೨೩ರ ನವೆಂಬರ್ ೦೧ ಅರ್ಹತಾ ದಿನಾಂಕವಾಗಿರುತ್ತದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು, ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ಅಂತಹವುಗಳನ್ನು ೨೦೨೩ರ ನವೆಂಬರ್ ೨೩ ರಿಂದ ಡಿಸೆಂಬರ್ ೦೯ ರೊಳಗಾಗಿ ಚುನಾವಣಾ ಆಯೋಗವು ನಿಗದಿಪಡಿಸಿರುವ ನಮೂನೆಯಲ್ಲಿ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ನಿರ್ಧಿಷ್ಟಾಧಿಕಾರಿಗಳಲ್ಲಿ ಸಲ್ಲಿಸಬಹುದಾಗಿದೆ. ಇದುವರೆಗೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸದೇ ಇರುವವರು, ಹೆಸರು ನೊಂದಣಿಗೆ ಈ ಅವಕಾಶ ಬಳಸಿಕೊಳ್ಳಬೇಕು ಎಂದರು.

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-೨೦೨೪ರ ಸಂಬಂಧ ೨೦೨೩ ರ ನವೆಂಬರ್ ೨೧ ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ನವೆಂಬರ್ ೨೩ ರಿಂದ ಡಿಸೆಂಬರ್ ೯ ರವರೆಗೆ ಅವಕಾಶ ಕಲ್ಪಿಸಲಾಗಿದೆ. ಡಿಸೆಂಬರ್ ೨೫ ರವರೆಗೆ ಹಕ್ಕುಗಳು ಮತ್ತು ಆಕ್ಷೇಪಣೆ ಅರ್ಜಿಗಳನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು. ಡಿಸೆಂಬರ್ ೩೦ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದರು. ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಪಟ್ಟಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಮತದಾರರ ನೋಂದಣಾಧಿಕಾರಿಗಳಾಗಿರುತ್ತಾರೆ. ಜಿಲ್ಲಾಧಿಕಾರಿಗಳು ಸಹಾಯಕ ಮತದಾರರ ನೋಂದಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಾರೆ.

RELATED ARTICLES
- Advertisment -
Google search engine

Most Popular