Saturday, April 19, 2025
Google search engine

Homeರಾಜ್ಯಸುದ್ದಿಜಾಲಜಾತಿ ಗಣತಿ ವರದಿ ಅಂಗೀಕರಿಸಲು ಸಹಕಾರ ನೀಡುವಂತೆ ಡಾ.ಹೆಚ್.ಸಿ.ಮಹದೇವಪ್ಪ ಮನವಿ

ಜಾತಿ ಗಣತಿ ವರದಿ ಅಂಗೀಕರಿಸಲು ಸಹಕಾರ ನೀಡುವಂತೆ ಡಾ.ಹೆಚ್.ಸಿ.ಮಹದೇವಪ್ಪ ಮನವಿ

ಕೆ.ಆರ್.ನಗರ: ಅವಕಾಶಗಳಿಂದ ವಂಚಿತರಾದ ಸಮುದಾಯಗಳಿಗೆ ನ್ಯಾಯ ಕೊಡಿಸುವ ಉದ್ದೇಶದಿಂದ ಮಾಡಲಾದ ಜಾತಿ ಗಣತಿ ವರದಿ ತಿರಸ್ಕರಿಸಬೇಕೆಂದು ಕೆಲವರು ವಿರುದ್ದ ಮಾಡುತ್ತಿದ್ದಾರೆ ಇದರ ಬದಲು ಅಂಗೀಕರಿಸಲು ಸಹಕಾರ ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖಾ ಸಚಿವರು ಆದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು.
ಪಟ್ಟಣದ ಮೈಸೂರು-ಹಾಸನ ಮುಖ್ಯ ರಸ್ತೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಕಟ್ಟಡ ಕಾಮಗಾರಿಗೆ ಚಾಲನೆ ಮತ್ತು ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನಡೆದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ವರದಿ ಸ್ವೀಕರಿಸಿ ವಂಚಿತರಿಗೆ ಅನುಕೂಲ ಮಾಡಲು ಸರ್ಕಾರ ಬದ್ದವಾಗಿದೆ ಎಂದರು.
ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಲಾದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದು ಇದರಿಂದ ರಾಜ್ಯದ ೧.೩೨ ಲಕ್ಷ ಕುಟುಂಬಗಳು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಹಕಾರಿಯಾಗಿದ್ದು ನಮ್ಮ ಸರ್ಕಾರ ನುಡಿದಂತೆ ನಡೆಯುವುದರ ಜತೆಗೆ ಬಡ ಜನತೆಯ ಉದ್ದಾರಕ್ಕಾಗಿ ಶ್ರಮಿಸುತ್ತಿದೆ ಇದನ್ನು ಜನತೆ ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗಾಗಿ ವರ್ಷಕ್ಕೆ ೩೫ ಸಾವಿರ ಕೋಟಿ ಖರ್ಚು ಮಾಡುತ್ತಿದೆ ಎಂದು ಮಾಹಿತಿ ನೀಡಿದ ಸಚಿವರು ಕರ್ನಾಟಕ ಸರ್ಕಾರ ಎಸ್ಸಿಪಿ/ಎಸ್‌ಟಿಪಿ ಯೋಜನೆಯಡಿಯಲ್ಲಿ ಸಮುದಾಯದವರ ಅಭಿವೃದ್ದಿಗಾಗಿ ೩೪ ಸಾವಿರ ಕೋಟಿ ರೂ ಮೀಸಲಿರಿಸಿದೆ .ಇದರ ಜನತೆ ಸರ್ಕಾರದ ಕಾಮಗಾರಿಗಳನ್ನು ಗುತ್ತಿಗೆ ಪಡೆಯಲು ಮೀಸಲಾತಿ ಕಲ್ಪಿಸಿದ್ದು ಕಾಂಗ್ರೆಸ್ ಸರ್ಕಾರ ಎಂದು ಹೇಳಿದರು.ರಾಜ್ಯ ಕಂಡ ದಕ್ಷ ಆಡಳಿತಗಾರ ಮತ್ತು ಪ್ರಾಮಾಣಿಕ ರಾಜಕಾರಣಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ವಿರೋಧ ಪಕ್ಷಗಳು ಷಡ್ಯಂತರ ರೂಪಿಸುತ್ತಿದ್ದು ಇದರಲ್ಲಿ ಅವರುಗಳು ಯಶಸ್ಸು ಕಾಣಲು ಸಾಧ್ಯವಿಲ್ಲ ಎಂದ ಜಿಲ್ಲಾ ಉಸ್ತುವಾರಿ ಸಚಿವರು ಜನರಿಗೆ ಉಪಯುಕ್ತವಾದ ಕಾರ್ಯಕ್ರಮಗಳನ್ನು ಜಾರಿ ಮಾಡಲು ಹೋರಾಟ ಮಾಡಬೇಕಾದ ವಿರೋಧ ಪಕ್ಷದವರು ವೈಯುಕ್ತಿಕ ನಿಂದನೆಗಾಗಿ ನಿಂತಿರುವುದು ವಿಪರ್ಯಸ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಮುದಾಯ ಭವನ ನಿರ್ಮಾಣ ಮಾಡಲು ಬೇಕಾಗಿರುವ ೬ ಕೋಟಿ ರೂಗಳನ್ನು ಮಂಜೂರು ಮಾಡುವುದರ ಜತೆಗೆ ಪ್ರತಿಮೆ ಬದಲಾವಣೆಗೆ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ಅಗತ್ಯ ಅನುದಾನ ಮಂಜೂರು ಮಾಡಿಸಿಕೊಡುವ ಮೂಲಕ ಸರ್ವ ಜನಾಂಗದ ಆರ್ಶಿವಾದ ಪಡೆದು ಅತ್ಯಂತ ಬಹುಮತದಿಂದ ಶಾಸಕರಾಗಿರುವ ಡಿ.ರವಿಶಂಕರ್ ಅವರಿಗೆ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ದನಿದ್ದೇನೆ ಎಂದು ಭರವಸೆ ನೀಡಿದರು.
ಶಾಸಕ ಡಿ.ರವಿಶಂಕರ್ ಮಾತನಾಡಿ ಚುನಾವಣಾ ಪೂರ್ವದಲ್ಲಿ ಸಮುದಾಯದ ಮುಖಂಡರಿಗೆ ನೀಡಲಾದ ಭರವಸೆಯಂತೆ ಭವನ ನಿರ್ಮಾಣ ಮಾಡಿಸಿಕೊಡುವುದರ ಜತೆಗೆ ಪ್ರತಿಮೆ ಬದಲಾವಣೆ ಮಾಡಲು ಬದ್ದನಾಗಿದ್ದು ತಾಲೂಕು ಕೇಂದ್ರವಾಗಿರುವ ಸಾಲಿಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲು ನಿವೇಶನ ಕೊಡಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.
ಕೆ.ಆರ್.ನಗರದ ಪ್ರಥಮ ದರ್ಜೆ ಕಾಲೇಜು ಪಕ್ಕದಲ್ಲಿರುವ ವಿದ್ಯಾರ್ಥಿ ನಿಲಯವನ್ನು ಪುನರ್ ನಿರ್ಮಾಣ ಮಾಡಿದ ನಂತರ ಸರ್ಕಾರದ ನಿಯಮಾನುಸಾರ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಎಂದು ನಾಮಕರಣ ಮಾಡಲಾಗಿದೆ, ಸಮುದಾಯದವರ ಆಶಯದಂತೆ ಈ ಹಿಂದೆ ಇದ್ದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯ ಎಂದು ಹೆಸರಿಡಬೇಕಾಗಿದ್ದು ಇದಕ್ಕೆ ಉಸ್ತುವಾರಿ ಸಚಿವರು ಸಹಕಾರ ನೀಡಬೇಕು ಎಂದು ಕೋರಿದರು.
ಮೂರು ವರ್ಷದ ಒಳಗೆ ಸಮುದಾಯ ಭವನದ ಕಾಮಗಾರಿ ಪೂರ್ಣಗೊಳಿಸಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಸಮುಖದಲ್ಲಿ ಉದ್ಘಾಟನೆ ಮಾಡಿಸಲಾಗುತ್ತದೆ ಇದರ ಜತೆಗೆ ವಿದ್ಯಾರ್ಥಿ ನಿಲಯ, ವಸತಿ ಶಾಲೆ ಸೇರಿದಂತೆ ಹಿಂದುಳಿದ ಗ್ರಾಮಗಳನ್ನು ಅಭಿವೃದ್ದಿ ಪಡಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿದ್ದಪ್ಪ, ಮಾಜಿ ಸದಸ್ಯ ರಾಜಯ್ಯ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಮತ್ತು ಶಾಸಕ ಡಿ.ರವಿಶಂಕರ್‌ರವರನ್ನು ಸಮಾಜದ ವತಿಯಿಂದ ಸನ್ಮಾನಿಸಲಾಯಿತು.ತಹಶೀಲ್ದಾರ್ ಸಿ.ಎಸ್.ಪೂರ್ಣಿಮ, ಇಒ ಜಿ.ಕೆ.ಹರೀಶ್, ಮುಖ್ಯಾಧಿಕಾರಿ ಡಾ.ಜಯಣ್ಣ, ಬಿಇಒ ಆರ್.ಕೃಷ್ಣಪ್ಪ, ಆರೋಗ್ಯಾಧಿಕಾರಿ ಡಾ.ಡಿ.ನಟರಾಜು, ಲೋಕೋಪಯೋಗಿ ಇಲಾಖೆಯ ಎಇಇ ಸುಮಿತ, ಸಮಾಜ ಕಲ್ಯಾಣಾಧಿಕಾರಿ ಎಂ.ಎಸ್.ಅಶೋಕ್, ತಾ.ಪಂ. ಮಾಜಿ ಸದಸ್ಯ ಜಾನಕಮ್ಮವೀರಭದ್ರಯ್ಯ, ಪುರಸಭೆ ಸದಸ್ಯರಾದ ಸೌಮ್ಯಲೋಕೇಶ್, ಶಂಕರ್‌ಸ್ವಾಮಿ, ಮಿಕ್ಸರ್‌ಶಂಕರ್, ಮಾಜಿ ಅಧ್ಯಕ್ಷೆ ಗೀತಾಮಹೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ನಗರಾಧ್ಯಕ್ಷ ಎಂ.ಜೆ.ರಮೇಶ, ವಕ್ತಾರ ಸೈಯದ್‌ಜಾಬೀರ್, ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಕಂಠಿಕುಮಾರ್, ನಂದೀಶ್, ಮುಖಂಡರಾದ ಡಿ.ಕೆ.ಕೊಪ್ಪಲುರಾಜಯ್ಯ, ಶಾಂತಿರಾಜ್, ಮಂಜುರಾಜ್, ಪುಟ್ಟಣ್ಣಯ್ಯ, ವೇಣುಗೋಪಾಲ್, ಮಂಜುನಾಥ್, ಚೆಲುವರಾಜು, ರಾಮಯ್ಯ, ನಂಜುoಡ, ಕಾಂತರಾಜು ಮತ್ತಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular