Saturday, April 19, 2025
Google search engine

Homeರಾಜಕೀಯಸಚಿವ ಸಂಪುಟ ದುರ್ಬಳಕೆ ‌ಮಾಡಿಕೊಳ್ಳುತ್ತಿರುವ ಮೊದಲ ವ್ಯಕ್ತಿ ಡಿಕೆಶಿ: ಕೆ ಎಸ್​ ಈಶ್ವರಪ್ಪ

ಸಚಿವ ಸಂಪುಟ ದುರ್ಬಳಕೆ ‌ಮಾಡಿಕೊಳ್ಳುತ್ತಿರುವ ಮೊದಲ ವ್ಯಕ್ತಿ ಡಿಕೆಶಿ: ಕೆ ಎಸ್​ ಈಶ್ವರಪ್ಪ

ಬೆಂಗಳೂರು: ಸಚಿವ ಸಂಪುಟ ದುರ್ಬಳಕೆ ‌ಮಾಡಿಕೊಳ್ಳುತ್ತಿರುವ ಮೊದಲ ವ್ಯಕ್ತಿ ಡಿಕೆ ಶಿವಕುಮಾರ್ ಎಂದು ಮಾಜಿ ಸಚಿವ ಕೆ ಎಸ್​ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್​ ಪಡೆಯಲು ಸಚಿವ ಸಂಪುಟ ಒಪ್ಪಿಗೆ  ನೀಡಿರುವ ಕುರಿತು ಕೆ.ಎಸ್  ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಈ ಹಿಂದೆ ನನ್ನ ವಿರುದ್ಧ ಆರೋಪ ಬಂದಾಗ ರಾಜೀನಾಮೆ ಕೊಟ್ಟಿದ್ದೆ. ಸಿಎಂ ಸಿದ್ದರಾಮಯ್ಯಗೆ ಕುರ್ಚಿ ಮುಖ್ಯ ಹೊರತು ನ್ಯಾಯವಲ್ಲ. ಉದ್ದುದ್ದ ಭಾಷಣ ಮಾಡುವ ನಾಯಕರಿಗೆ ಇದು ಗೊತ್ತಿಲ್ಲವೇ? ಕಾಂಗ್ರೆಸ್ ನಾಯಕರಿಗೆ ನಾಚಿಕೆ ಆಗಬೇಕು. ಗ್ಯಾರಂಟಿ ಯೋಜನೆ ಹೆಸರಲ್ಲಿ ಮೋಸ ಮಾಡಿ ಅಧಿಕಾರಕ್ಕೆ ‌ಬಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜನ ಬುದ್ಧಿ ಕಲಿಸುತ್ತಾರೆ ಎಂದು ಹೇಳಿದರು.

ಇದು ಗೂಂಡಾಗಳಿಗೆ ರಕ್ಷಣೆ ಕೊಡುವ ಸರ್ಕಾರ. ಜಾರ್ಜ್ ಮೇಲೆ ಆಪಾದನೆ ಬಂದಾಗ ರಾಜೀನಾಮೆ ಪಡೆದು ನಂತರ ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡರು. ನನ್ನ ಮೇಲೆ ಆಪಾದನೆ ಬಂತು‌ ನಾನು ರಾಜೀನಾಮೆ ಕೊಟ್ಟೆ. ತಜ್ಞರು ಹೇಳುತ್ತಿದ್ದಾರೆ, ಸಿಬಿಐಗೆ ತನಿಖೆಗೆ ವಹಿಸಲು ಅನುಮತಿ‌ ಇದೆ. ಆದರೆ ಹಿಂಪಡೆಯಲು ಅನುಮತಿ ಬೇಕಿಲ್ಲವೆಂದು. ಸಿದ್ದರಾಮಯ್ಯ ಅವರಿಗೆ ಈ ವಿಷಯ ಗೊತ್ತಿಲ್ವಾ? ಇದು ದೇಶದಲ್ಲೇ ದೊಡ್ಡ ಅಪರಾಧ. ಸಚಿವ ಸಂಪುಟಕ್ಕೆ ಬೆಲೆ ಇಲ್ಲ ಅಂತ ಇವರು ಸಾಬೀತು ಮಾಡಿದರು. ಸಂವಿಧಾನಕ್ಕೆ ಎಲ್ಲಿ ಬೆಲೆ ಇದೆ ಅಲ್ಲಿ ಸರಿಯಾದ ತೀರ್ಪು ಬರುತ್ತದೆ. ಸಿಬಿಐ ತನಿಖೆ ಹಿಂಪಡೆಯುವುದನ್ನೇ ಸರ್ಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ನೂರಕ್ಕೆ ನೂರರಷ್ಟು ಡಿಕೆ ಶಿವಕುಮಾರ್ ವಿರುದ್ಧವಾಗಿ ತೀರ್ಪು ಬರಲಿದೆ. ನೂರಕ್ಕೆ ನೂರರಷ್ಟು ಡಿಕೆ ಶಿವಕುಮಾರ್‌ ಜೈಲಿಗೆ ಹೋಗುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಇದರಿಂದ ತಪ್ಪಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ ‌ಇದೊಂದು ಕಪ್ಪು ಚುಕ್ಕೆ. ಡಿಕೆ ಶಿವಕುಮಾರ್ ಸಲುವಾಗಿ ಸಿದ್ದರಾಮಯ್ಯ ಕಪ್ಪು ಚುಕ್ಕೆ ಅಂಟಿಸಿಕೊಂಡರು ಎಂದು ಗುಡುಗಿದರು.

RELATED ARTICLES
- Advertisment -
Google search engine

Most Popular