Tuesday, April 22, 2025
Google search engine

Homeರಾಜಕೀಯಡಿಕೆಶಿ ಪ್ರಾಮಾಣಿಕರಾಗಿದ್ದರೆ ಪ್ರಕರಣ ಹಿಂಪಡೆಯುವ ಅಗತ್ಯವಿರಲಿಲ್ಲ: ನಳಿನ್ ಕುಮಾರ್ ಕಟೀಲ್

ಡಿಕೆಶಿ ಪ್ರಾಮಾಣಿಕರಾಗಿದ್ದರೆ ಪ್ರಕರಣ ಹಿಂಪಡೆಯುವ ಅಗತ್ಯವಿರಲಿಲ್ಲ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಾಮಾಣಿಕರು, ಪಾರದರ್ಶಕವಾಗಿ ಇದ್ದಿದ್ದೇ ಆದರೆ ಅವರ ವಿರುದ್ಧದ ಪ್ರಕರಣ ಹಿಂಪಡೆಯುವ ಅಗತ್ಯ ಇರಲಿಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.

ಸಚಿವ ಸಂಪುಟ ಸಭೆಯಲ್ಲಿ ಡಿಕೆಶಿ ಅವರ ಮೇಲಿದ್ದ ಸಿಬಿಐ ತನಿಖೆ ಪ್ರಕರಣ ವಾಪಸ್ ಪಡೆಯಲು ನಿರ್ಧರಿಸಿದ ವಿಚಾರಕ್ಕೆ ಸಂಬಂಧಿಸಿ  ಅವರು ಇಲ್ಲಿ ಪ್ರತಿಕ್ರಿಯಿಸಿದರು.

ಅವರಿಗೆ ಭಯ ಯಾಕೆ? ಅವರ ಪ್ರಾಮಾಣಿಕತೆ ಪ್ರಶ್ನಾರ್ಥಕ ಚಿಹ್ನೆಯಲ್ಲಿದೆ. ಸಿಬಿಐ ತನಿಖೆಯ ವೇಳೆ ಸರ್ಕಾರ ಪ್ರಕರಣವನ್ನು ವಾಪಸ್ ತೆಗೆದುಕೊಳ್ಳುವುದು ಸರಿಯಲ್ಲ ಎಂದರು.

ಇದು ಸರ್ಕಾರದ ಭ್ರಷ್ಟಾಚಾರವನ್ನು ಸಾರ್ವಜನಿಕವಾಗಿ ತಿಳಿಸುತ್ತದೆ. ಇದೊಂದೇ ಪ್ರಕರಣ ಇಲ್ಲ, ಇ.ಡಿ.ಯಲ್ಲೂ ಸಾಕಷ್ಟು ಪ್ರಕರಣಗಳು ಇವೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular