ರಾಮನಗರ: ಬೆಂಗಳೂರು ಪದವಿಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರ ಮತದಾರರ ಪಟ್ಟಿಯ ಸಂಬಂಧ ಮಾನ್ಯಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಕರಡು ಮತದಾರರ ಪಟ್ಟಿಯನ್ನುನ. ೨೩ರ ಪ್ರಕಟಿಸಲಾಗಿದೆ ಎಂದು ಚುನಾವಣೆ ತಹಶೀಲ್ದಾರ ಶಿವಕುಮಾರ್ ಶ್ಯಾಬ್ ಅವರು ತಿಳಿಸಿದರು.
ಅವರುಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧರಾಜಕೀಯ ಪಕ್ಷದ ಮುಖಂಡರೊಂದಿಗೆಆಯೋಜಿಸಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಡು ಮತದಾರರ ಪಟ್ಟಿಯನ್ವಯ ಜಿಲ್ಲೆಯಲ್ಲಿ ಪದವಿ ಕ್ಷೇತ್ರದಿಂದ ಒಟ್ಟು ೧೩,೫೫೪ ಮತದಾರರಿದ್ದು,೭೦೪೫, ೬೫೦೭ ಮಹಿಳೆಯರು, ೦೨ ಇತರೆ ಮತದಾರರಿದ್ದಾರೆ. ಹಾಗೂ ಶಿಕ್ಷಕರ ಮತದಾರರಕ್ಷೇತ್ರದಿಂದಒಟ್ಟು ೧೯೫೮ ಮತದಾರರಿದ್ದು, ೧೦೭೯ , ೮೭೯ ಮಹಿಳೆಯರು, ೦೦ ಇತರೆ ಮತದಾರರಿದ್ದಾರೆ ಎಂದು ತಿಳಿಸಿದರು.
ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಮತದಾರರ ನೋಂದಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ತಹಶೀಲ್ದಾರ್ ರವರಕಚೇರಿ ಹಾಗೂ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಪ್ರಕಟಿಸಲಾಗಿರುತ್ತದೆ ಎಂದು ತಿಳಿಸಿದರು. ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಡಿ. ೯ ರವರೆಗೆಸಲ್ಲಿ ಸಬಹುದಾಗಿದೆ.ಡಿ. ೨೫ರಂದು ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲಾಗುವುದು.ಡಿ. ೩೦ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆಎಂದರು. ವಿವಿಧರಾಜಕೀಯ ಪಕ್ಷಗಳ ಮುಖಂಡರುಗಳು ಸಭೆಯಲ್ಲಿ ಹಾಜರಿದ್ದರು.