ಬೆಂಗಳೂರು: ನಗರದ ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಮೂರು ದಿನಗಳ ಕಾಲ ವಿಶೇಷ ಕಡಲೇಕಾಯಿ ಪರಿಷೆಯನ್ನು ಹಮ್ಮಿಕೊಳ್ಳಲಾಗಿದೆ.
ಇಂದು ಸೋಮವಾರ ನಡೆದ ಮಾಧ್ಯಮಗೋಷ್ಟಿಯಲ್ಲಿ ಕಾಡು ಮಲ್ಲೇಶ್ವರ ಗೆಳೆಯರ ಬಳಗದ ಅಧ್ಯಕ್ಷ ಬಿ.ಕೆ. ಶಿವರಾಂ ಮಾತನಾಡಿ, ೩ ದಿನಗಳ ಕಾಲ ಅಂದರೇ, ಡಿ.೨ ರಿಂದ ಡಿ.೪ ರವರಗೆ ಮಲ್ಲೇಶ್ವರಂನ ಕಾಡುಮಲ್ಲೇಶ್ವರದಲ್ಲಿ ೭ನೇ ವರ್ಷದ ಕಡಲೆಕಾಯಿ ಪರಿಷೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ೮೦೦ ಕೆಜಿ ಕಡಲೆಕಾಯಿಗಳಿಂದ ಶೃಂಗರಿಸಿದ ೨೦ ಎತ್ತರ ೨೦ ಉದ್ದದ ನಂದಿಯನ್ನು ಇಡಲಾಗುತ್ತದೆ ಎಂದು ಹೇಳಿದರು.
ಮಲ್ಲೇಶ್ವರಂ ಕಡಲೆಕಾಯಿ ಪರಿಷೆಗೆ ತಮಿಳುನಾಡು, ಆಂಧ್ರ, ತೆಲಂಗಾಣ ಹಾಗೂ ನಮ್ಮ ರಾಜ್ಯದಿಂದ ನೂರಾರು ರೈತರು ಕಡಲೆಕಾಯಿ ಪರಿಷೆಯಲ್ಲಿ ಭಾಗವಹಿಸಲಿದ್ದಾರೆ. ೨೦೦ ಮಳಿಗೆಗಳಲ್ಲಿ ರೈತರು ಬೆಳೆದ ಕಡಲೆಕಾಯಿ ಮತ್ತು ತರಕಾರಿ ಕರಕುಶಲ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಪ್ಲಾಸ್ಟಿಕ್ ಮುಕ್ತಕ್ಕೆ ಜನರು ಸಹಕಾರ ನೀಡಬೇಕು ಎಂದು ತಿಳಿಸಿದರು.

ಡಿ.೨ರಂದು ಬೆಳಗ್ಗೆ ೧೧ ಗಂಟೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಶಾಸಕ ಮುನಿರತ್ನ, ಡಾ.ಸಿ.ಎನ್. ಅಶ್ವಥ್ ನಾರಾಯಣ್ ಅವರು ಕಡಲೆಕಾಯಿ ಪರಿಷೆ ಉದ್ಘಾಟಿಸಲಿದ್ದಾರೆ.