ಮೈಸೂರು: ೫೩೬ನೇ ಭಕ್ತ ಕನಕದಾಸ ಜಯಂತಿಯನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಬ್ರಹ್ಮಣ್ಯ ಮನವಿ ಮಾಡಿದರು.
ನಗರದ ನಂಜುಮಳಿಗೆ ವೃತ್ತದಲ್ಲಿ ಇದೇ ತಿಂಗಳು ೩೦ ರಂದು ಸರ್ಕಾರದ ವತಿಯಿಂದ ನಡೆಯುತ್ತಿರುವ ೫೩೬ನೇ ಕನಕ ಜಯಂತಿಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೃಷ್ಣರಾಜ ಯುವ ಬಳಗದ ಗೌರವಾಧ್ಯಕ್ಷರು ಹಾಗೂ ಕೆಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ ಸಾರ್ವಜನಿಕರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಲು ನಿಟ್ಟಿನಲ್ಲಿ ಪ್ರಚಾರ ರಥಕ್ಕೆ ಚಾಲನೆ ನೀಡಲಾಯಿತು.
ಕರ್ನಾಟಕ ಪ್ರದೇಶ ಕುರುಬರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಬ್ರಹ್ಮಣ್ಯ ಅವರು ಇದೇ ತಿಂಗಳು ನವಂಬರ್ ೩೦ರಂದು ಸರ್ಕಾರದ ವತಿಯಿಂದ ನಡೆಯುತ್ತಿರುವ ಕನಕ ಜಯಂತಿ ಯಶಸ್ವಿಗೊಳಿಸುವ ಮೂಲಕ ಈ ಬಾರಿ ಅದ್ದೂರಿಯಾಗಿ ಆಚರಿಸಬೇಕು. ಎಲ್ಲಾ ಕ್ಷೇತ್ರಗಳಲ್ಲೂ ಕುರುಬ ಸಮಾಜವನ್ನು ಸದೃಢಗೊಳಿಸಲು ನಾವೆಲ್ಲರೂ ಒಟ್ಟಾಗಿ ಶ್ರಮಿಸುವ ಮೂಲಕ ವಿಶಿಷ್ಟ ರೀತಿಯ ಕನಕ ಜಯಂತಿ ಕಾರ್ಯಕ್ರಮಕ್ಕೆ ಎಲ್ಲರೂ ಸಹಕಾರ ನೀಡಬೇಕು, ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಬೇಕು ಎಂದರು.
ನಂತರ ಮಾತನಾಡಿದ ಕೆಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ ಕನಕದಾಸರು ನಾಡಿನ ಉದ್ದಗಲಕ್ಕೂ ಕಾಲ್ನಡಿಗೆಯಲ್ಲಿ ಸಂಚರಿಸಿ ಭಕ್ತಿಭಾವ, ವೈರಾಗ್ಯಗಳನ್ನು ಸಾರಿ ಸಮಾಜವನ್ನು ಜಾಗೃತಿಗೊಳಿಸಿದರು. ನವ ಸಮಾಜ ನಿರ್ಮಾಣ ಮಾಡಲು ಕನಕದಾಸರ ಚಿಂತನೆ, ತತ್ವ ಮತ್ತು ಅವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಇದೆ ಸಂದರ್ಭದಲ್ಲಿ ಹಾಜರಿದ್ದ ತೀರ್ಥ ಕುಮಾರ್, ರವಿಚಂದ್ರ, ಎಸ್ ಎನ್ ರಾಜೇಶ್, ಕಂಸಾಳೆ ರವಿ, ನವೀನ್ ಕೆಂಪಿ, ಮಂಜು, ಮಂಜುನಾಥ್, ಹಾಗೂ ಇನ್ನಿತರರು ಹಾಜರಿದ್ದರು.