ಚಾಮರಾಜನಗರ: ಪ್ರಸ್ತುತ ದಿನಗಳಲ್ಲಿ ಪರಭಾಷೆಗಳ ಹೇರಿಕೆಯ ಪರಿಣಾಮ ಕನ್ನಡ ಭಾಷೆಯ ಕಲಿಕೆಯ ಮೇಲೆ ನಕಾರಾತ್ಮಕ ಪರಿಣಾಮಗಳುಂಟಾಗುತ್ತಿದ್ದು, ಇಂದಿನ ಯುವಜನತೆಗೆ ಭಾಷೆಯ ಬಳಕೆಯ ಕುರಿತು ಅರಿವು ಮೂಡಿಸಬೇಕಿದೆ. ಇದರೊಂದಿಗೆ ವ್ಯವಹಾರದಲ್ಲಿ ಭಾಷಾ ಸ್ಪಷ್ಟತೆಯ ಬಗ್ಗೆ ಮಾಹಿತಿ ನೀಡಬೇಕಿದೆ ಎಂದು ಡಾ ಮಹೇಂದ್ರ ಪಟೇಲ್ ಅಭಿಪ್ರಾಯ ಪಟ್ಟರು.
ತಾಲೂಕಿನ ಹೊಂಗನೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಜೆಎಸ್‌ಬಿ ಪ್ರತಿನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ ೨೦೨೩’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿ ಕನ್ನಡ ಭಾ? ನಮ್ಮ ಉಸಿರು. ನಾವು ಪ್ರಪಂಚದ ಯಾವುದೇ ಭಾಷೆಯನ್ನು ಕಲಿತರೂ ನಮ್ಮ ಕನ್ನಡ ಭಾಷೆಯನ್ನು ಮರೆಯದೆ ಸುಲಲಿತವಾಗಿ ಮಾತನಾಡುವುದನ್ನು ಕಲಿಯಬೇಕು.
ಇತರೆ ಭಾಷೆಗಳನ್ನು ನಾವು ಕಲಿಯುವುದರಿಂದ ನಮ್ಮ ಜ್ಞಾನ ಹೆಚ್ಚುತ್ತದೆ. ಇತರೆ ಭಾಷೆಗಳನ್ನೂ ಗೌರವಿಸುವ ಜತೆಗೆ ನಮ್ಮ ಭಾಷೆಯನ್ನು ಹೆಚ್ಚು ಪ್ರೀತಿಸಬೇಕು. ಪ್ರಸ್ತುತ ನಾವು ಕನ್ನಡವನ್ನು ಉಳಿಸುವ ಅಗತ್ಯವಿಲ್ಲ. ಬದಲಿಗೆ ಕನ್ನಡವನ್ನು ಹೆಚ್ಚಾಗಿ ಬಳಸಿದರೆ ತನ್ನಂತಾನೆ ಭಾಷೆ ಉಳಿಯುತ್ತದೆ. ಕನ್ನಡ ನಾಡಿನಲ್ಲಿ ಹುಟ್ಟಿ ಬೆಳೆದು ಇಲ್ಲಿನ ನೀರು, ಗಾಳಿ, ಆಹಾರ ಪಡೆಯುವ ನಾವುಗಳು ಭಾಷೆಯನ್ನು ಉಳಿಸಿ ಬೆಳೆಸಬೇಕಾದರೆ ಕನ್ನಡ ಮಾತನಾಡುವ ಜೊತೆಗೆ ಎಲ್ಲಾ ವ್ಯವಹಾರಗಳನ್ನು ಕನ್ನಡದಲ್ಲಿಯೇ ವ್ಯವಹರಿಸಬೇಕು. ವಿದ್ಯಾರ್ಥಿಗಳಿಗೆ ಶಿಕ್ಷಣ ಬಹುಮುಖ್ಯ. ನಿಮ್ಮ ಜೀವನವನ್ನು ನೀವೇ ರೂಪಿಸಿಕೊಳ್ಳಬಹುದು. ಮುಂದೆ ನೀವು ಏನಾಗಬೇಕು ಎನ್ನುವುದನ್ನು ನೀವೇ ತೀರ್ಮಾನಿಸಿ ನಿರ್ಧಾರ ತೆಗೆದುಕೊಂಡು ಆ ದಿಕ್ಕಿನಲ್ಲಿ ಸಾಗಲು ಶ್ರಮಿಸಬೇಕು. ನಮ್ಮ ಮಾತೃಭಾಷೆ ನಮ್ಮ ಜೀವನದಲ್ಲಿ ಬಹಳ ಮುಖ್ಯ. ಅದನ್ನು ಬಳಸಿಕೊಂಡು ನಾವು ಬೆಳೆಯಬೇಕು ಎಂದು ತಿಳಿಸಿದರು.
ಶಾಲೆಯ ಸಂಪನ್ಮೂಲ ಶಿಕ್ಷಕ ಶಂಕರಮೂರ್ತಿ ಮಾತನಾಡಿ ವಿಶ್ವದ ೫ ಪ್ರಮುಖ ಭಾಷೆಗಳಲ್ಲಿ ಕನ್ನಡವೂ ಒಂದಾಗಿರುವುದು ಕನ್ನಡಿಗರು ಹೆಮ್ಮೆ ಪಡಬೇಕಾದ ವಿಷೆಯ. ಕನ್ನಡಿಗರು ಹೆಮ್ಮೆ ಪಡಬೇಕಾದ ವಿಷೆಯ. ಕನ್ನಡ ಎಂದರೆ ನಮ್ಮ ನಾಡು, ನುಡಿ, ಭಾಷೆ, ಜೀವನ, ಸಂಸ್ಕೃತಿಯಾಗಬೇಕು. ಭಾಷೆ ಹೃದಯದಲ್ಲಿ ಇರಬೇಕು. ಕನ್ನಡ ಹೃದಯದ ಭಾಷೆಯಾಗಬೇಕು ಎಂದು ತಿಳಿಸಿದರು.
ಜೆ ಎಸ್ ಬಿ ಎಸ್ ಶಶಿಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮ ನಿಮಿತ್ತ ಶಾಲೆಯಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಕನ್ನಡ ಪುಸ್ತಕಗಳ ಬಹುಮಾನ, ಜೊತೆಗೆ ಶಾಲೆಯ ಎಲ್ಲಾ ಮಕ್ಕಳಿಗೆ ಕನ್ನಡ ಕಿರುಪುಸ್ತಕ ನೀಡಿ, ಕನ್ನಡ ಓದನ್ನು ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆ ಶಿಕ್ಷಕರಾದ ಮೋಹನಕುಮಾರ, ರಾಘವೇಂದ್ರ, ಮೋಹನಕುಮಾರಿ, ರಾಜೇಶ್ವರಿ, ಪರಶಿವಮೂರ್ತಿ ಶಾಲೆ ಬೋಧಕೇತರ ಸಿಬ್ಬಂದಿಗಳು ಸೇರಿದಂತೆ ಇತರರು ಹಾಜರಿದ್ದರು.