Monday, April 21, 2025
Google search engine

Homeಅಪರಾಧಚಾಮರಾಜನಗರ: ಒಂದು ತಿಂಗಳ ಹಿಂದೆ ಮದುವೆಯಾಗಿದ್ದ ಯುವಕ ಆತ್ಮಹತ್ಯೆ

ಚಾಮರಾಜನಗರ: ಒಂದು ತಿಂಗಳ ಹಿಂದೆ ಮದುವೆಯಾಗಿದ್ದ ಯುವಕ ಆತ್ಮಹತ್ಯೆ

ಚಾಮರಾಜನಗರ: ಒಂದು ತಿಂಗಳ ಹಿಂದೆ ಅಷ್ಟೇ ಮದುವೆಯಾಗಿದ್ದ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕು ಕಜ್ಜಿಹುಂಡಿ ಗ್ರಾಮದಲ್ಲಿ ನಡೆದಿದೆ.

ಸಂತೋಷ್ (28) ಆತ್ಮಹತ್ಯೆಗೆ ಶರಣಾದ ಯುವಕ.

ಪರಸ್ತ್ರೀ ಸಂಬಂಧ ಬಹಿರಂಗಪಡಿಸುತ್ತೇನೆಂದು ಸ್ನೇಹಿತನೋರ್ವ ಹಣಕ್ಕಾಗಿ ಬ್ಲ್ಯಾಕ್ ಮೇಲ್​ ಮಾಡಿದ್ದು, ಇದರಿಂದ ಮನನೊಂದು ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಸ್ನೇಹಿತ ರವಿ ಎನ್ನುವಾತ ಪರಸ್ತ್ರೀ ಮಹಿಳೆಯೊಂದಿಗೆ ಅಕ್ರಮ ಸಂಬಂಧವಿರುವ ಬಗ್ಗೆ ಎಲ್ಲರಿಗೂ ತಿಳಿಸುತ್ತೇನೆಂದು ಹಣಕ್ಕಾಗಿ ಸಂತೋಷ್​ ಗೆ ಬ್ಲ್ಯಾಕ್‌ಮೇಲ್ ಮಾಡಿದ್ದ. ಅಲ್ಲದೇ ಬೆದರಿಸಿ 2 ಲಕ್ಷ ರೂ. ವಸೂಲಿ ಮಾಡಿದ್ದ. ಆದರೂ ಸಮ್ಮನಾಗದ ರವಿ, ಇನ್ನಷ್ಟು ಹಣ ಬೇಕೆಂದು ಮತ್ತೆ ಮತ್ತೆ ಬ್ಲ್ಯಾಕ್​ ಮೇಲ್​ ಮಾಡಿದ್ದಾನೆ. ಇದರಿಂದ ಮನನೊಂದು ಸಂತೋಷ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆರೋಪಿಸಲಾಗಿದೆ.

RELATED ARTICLES
- Advertisment -
Google search engine

Most Popular