Monday, April 21, 2025
Google search engine

Homeರಾಜ್ಯಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ: ಶಾಲೆಗೆ ಓಡೋಡಿ ಬಂದ ಪೋಷಕರು

ಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ: ಶಾಲೆಗೆ ಓಡೋಡಿ ಬಂದ ಪೋಷಕರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ.

ಬಸವೇಶ್ವರ ನಗರದ ಖಾಸಗಿ ಶಾಲೆಗಳಿಗೆ ಹಾಗೂ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗೂ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ.

ಇನ್ನು ಆತಂಕಗೊಂಡ ಪೋಷಕರು ಶಾಲೆ ಬಳಿ ಓಡೋಡಿ ಬಂದು ತಮ್ಮ-ತಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ.

ಇ-ಮೇಲ್ ಬಾಂಬ್​​​ ಬೆದರಿಕೆ ಸಂದೇಶ ಬಂದ ಹಿನ್ನೆಲೆಯುಲ್ಲಿ ಸದಾಶಿವನಗರದಲ್ಲಿರುವ ನೀವ್ ಅಕಾಡೆಮಿ ಶಾಲೆಗೆ ರಜೆ ನೀಡಲಾಗಿದೆ. ನೀವ್ ಅಕಾಡೆಮಿ ಶಾಲೆಗೆ ಇಂದು ಆಡಳಿತ ಮಂಡಳಿ ರಜೆ ಘೋಷಿಸಿದೆ.

ಇನ್ನು ಈ ಬಾಂಬ್ ಬೆದರಿಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾತನಾಡಿ, ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದಾರೆ. ಶಾಲೆಗಳಿಗೆ ಬಾಂಬ್ ಪತ್ತೆ ದಳ, ನಿಷ್ಕ್ರಿಯ ದಳವನ್ನು ಕಳಿಸಿದ್ದೇವೆ. ಬೆದರಿಕೆ ಬಂದಿರುವ ಶಾಲೆಗಳಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಾರೆ. ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಮಾಧ್ಯಮಗಳಲ್ಲಿನ ಸುದ್ದಿ ನೋಡಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸದಾಶಿವನಗರದಲ್ಲಿರುವ ನ್ಯೂ ಅಕಾಡೆಮಿ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

RELATED ARTICLES
- Advertisment -
Google search engine

Most Popular