Sunday, April 20, 2025
Google search engine

Homeರಾಜ್ಯಶಾಲೆಗಳಿಗೆ ಬಾಂಬ್ ಬೆದರಿಕೆ: ಘಟನೆಯನ್ನು ಸರ್ಕಾರ ಲಘುವಾಗಿ ಪರಿಗಣಿಸಬಾರದು ಎಂದ ಹೆಚ್.ಡಿ ಕುಮಾರಸ್ವಾಮಿ

ಶಾಲೆಗಳಿಗೆ ಬಾಂಬ್ ಬೆದರಿಕೆ: ಘಟನೆಯನ್ನು ಸರ್ಕಾರ ಲಘುವಾಗಿ ಪರಿಗಣಿಸಬಾರದು ಎಂದ ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಬೆಂಗಳೂರಿನ 15 ಖಾಸಗಿ ಶಾಲೆಗಳಿಗೆ ಇಂದು ಬೆಳಿಗ್ಗೆ ಇ ಮೇಲೆ ಮೂಲಕ ಬಾಂಬ್ ಬೆದರಿಕೆ ಹಾಕಿರುವ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು,  ರಾಜ್ಯ ಸರಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು ಎಂದು ತಿಳಿಸಿದ್ದಾರೆ.

ಈ ಕುರಿತು ಸಮಾಜಿಕ ಜಾಲತಾಣ ಎಕ್ಸ್ ನಲ್ಲಿ, ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ದುರುದ್ದೇಶದಿಂದಲೇ ದುಷ್ಟಶಕ್ತಿಗಳು ಇಂತಹ ಹುನ್ನಾರ ನಡೆಸಿರಬಹುದು ಎಂದು ಬರೆದಿದ್ದಾರೆ.

ಈ ಬೆದರಿಕೆಗಳ ಬಗ್ಗೆ ಅಮೂಲಾಗ್ರ ತನಿಖೆ ನಡೆಸಿ, ಇದರ ಹಿಂದೆ ಯಾರಿದ್ದಾರೆ? ಮೂಲ ಯಾವುದು ಎನ್ನುವುದನ್ನು ಪತ್ತೆ ಹಚ್ಚಿ ದುಷ್ಟರ ಹೆಡೆಮುರಿ ಕಟ್ಟಬೇಕು. ಈ ಬಗ್ಗೆ ಕೇಂದ್ರ ಸರಕಾರದ ನೆರವು ಪಡೆಯುವ ಬಗ್ಗೆ ರಾಜ್ಯ ಸರಕಾರ ಮೀನಾಮೇಷ ಎಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ಸರ್ಕಾರ ನೀಡಬೇಕು ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular