Sunday, April 20, 2025
Google search engine

Homeಅಪರಾಧಚಿಕ್ಕಮಗಳೂರು: ಸಿ ಟಿ ರವಿ ಆಪ್ತನ ಮೇಲೆ ಮುಸುಕುಧಾರಿಗಳಿಂದ ಹಲ್ಲೆ

ಚಿಕ್ಕಮಗಳೂರು: ಸಿ ಟಿ ರವಿ ಆಪ್ತನ ಮೇಲೆ ಮುಸುಕುಧಾರಿಗಳಿಂದ ಹಲ್ಲೆ

ಚಿಕ್ಕಮಗಳೂರು: ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಅವರ ಆಪ್ತ, ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದುರ್ಗೇಶ್ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಗುರುವಾರ(ನ.30) ಮಧ್ಯರಾತ್ರಿ ಮುಸುಕುಧಾರಿಗಳು ಮನೆಗೆ ನುಗ್ಗಿ ರಾಡ್​ ನಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಕೈಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ದುರ್ಗೇಶ್ ​ನನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆ ದಾಖಲಿಸಲಾಗಿದೆ.

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸಿಟಿ ರವಿ ಅವರು ಜಿಲ್ಲಾಸ್ಪತ್ರೆಗೆ ದೌಡಾಯಿಸಿ ಆಪ್ತ ದುರ್ಗೇಶ್ ಆರೋಗ್ಯ ವಿಚಾರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ ರವಿ, ಹತ್ಯೆ ಮಾಡುವ ಉದ್ದೇಶದಿಂದ ಹಲ್ಲೆ ಮಾಡಲಾಗಿದೆ. ರಾಡ್​ ನಿಂದ ಹಲ್ಲೆ ಮಾಡಿರುವ ಉದ್ದೇಶ ಕೊಲೆ ಮಾಡುವುದು. ಮಂಕಿ ಕ್ಯಾಪ್ ಗ್ಲೌಸ್​ ಹಾಕಿಕೊಂಡು ಬಂದಿದ್ದಾರೆ ಎಂದು ಆರೋಪಿಸಿದರು.

ದುರ್ಗೆಶ್ ಬಗರ್ ಹುಕುಂ ಸಾಗುವಳಿ ಹಾಗೂ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ಮಾಡಿದ್ದಾರೆ. ಗೋಮಾಳ ಜಮೀನಿನಲ್ಲಿ ಕ್ರಷರ್ ಗೆ ಅನುಮತಿ ನೀಡಿದ್ದಾರೆ. ಆದರೆ ರೈತರಿಗೆ ರಾಗಿ ಬೆಳೆಯಲು ಬಿಡುವುದಿಲ್ಲ.ಇದರ ವಿರುದ್ಧ ದುರ್ಗೇಶ್ ಹೋರಾಟ ಮಾಡಿದ್ದಾರೆ. ದುರುದ್ದೇಶ ಪೂರ್ವಕವಾಗಿ ಹತ್ಯೆ ಮಾಡಲು ಹಲ್ಲೆ ಮಾಡಲಾಗಿದೆ. ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

RELATED ARTICLES
- Advertisment -
Google search engine

Most Popular