ಮಲೆ ಮಹದೇಶ್ವರಬೆಟ್ಟ : ಇಲ್ಲಿನ ಮಲೆಮಹದೇಶ್ವರಸ್ವಾಮಿ ದೇವಸ್ಥಾನದ ಬಳಿ ಇರುವ ಲಾಡು ಪ್ರಸಾದ ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಲಾಡು ತಯಾರಿಕಾ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಪ್ರಾಧಿಕಾರದ ಸಿಬ್ಬಂದಿ ಬೆಂಕಿ ನಂದಿಸಲು ಹರ ಸಾಹಸ ಪಡುತ್ತಿದ್ದಾರೆ.
ಘಟಕದಲ್ಲಿರುವ ಸಿಲಿಂಡರ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಇದನ್ನು ನಂದಿಸುವುದರೊಳಗೆ ಘಟಕದಲ್ಲಿ ಸಿಹಿ ಜಿಡ್ಡು ಹಾಗೂ ಎಣ್ಣೆ ಪದಾರ್ಥ ಇದ್ದ ಪರಿಣಾಮ ಬೆಂಕಿ ಆವರಿಸಿದೆ ಎಂದು ಹೇಳಲಾಗುತ್ತಿದೆ. ಬೆಂಕಿಯ ಕೆನ್ನಾಲಿಗೆ ಘಟಕದಲ್ಲಿದ್ದ ವಸ್ತುಗಳು ಭಸ್ಮವಾಗಿದೆ ಎನ್ನಲಾಗಿದ್ದು. ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.