ಮಂಡ್ಯ: ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರೆದಿದ್ದು, ಉಪವಾಸ ಸತ್ಯಾಗ್ರಹ 8ನೇ ದಿನಕ್ಕೆ ಕಾಲಿಟ್ಟಿದೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ 89 ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ರೈತ ಹಿತರಕ್ಷಣಾ ಸಮಿತಿ ಧರಣಿ ಸ್ಥಳದಲ್ಲಿ ಕಾವೇರಿಗಾಗಿ ಜೈ ಕರ್ನಾಟಕ ಪರಿಷತ್ ಸದಸ್ಯರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಜೈ ಕರ್ನಾಟಕ ಪರಿಷತ್ ರಾಜ್ಯಾಧ್ಯಕ್ಷ ನಾರಾಯಣ್ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದು, ಧರಣಿ ಸ್ಥಳದಲ್ಲೇ ಕಲಾವಿದರು ಜಾನಪದ ಹಾಡು ಹಾಡುವ ಮೂಲಕ ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ತಮಿಳುನಾಡಿಗೆ ನಿರಂತರವಾಗಿ ನೀರು ಹೋಗ್ತಿದೆ. ಸರ್ಕಾರ ಮಾತ್ರ ಯಾವುದೇ ರೀತಿಯ ನಿರ್ಧಾರ ತೆಗೆದುಕೊಂಡಿಲ್ಲ. ರೈತರು ಬೆಳೆದ ಬೆಳೆಗೆ ನೀರಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬರ ಕ್ಷೇತ್ರವನ್ನ ರಾಜ್ಯ ಸರ್ಕಾರ ಘೋಷಣೆ ಮಾಡಿ ಪರಿಹಾರ ಕೊಟ್ಟಿಲ್ಲ. ತಮಿಳುನಾಡಿನಲ್ಲಿ ಮಳೆಯಾಗಿದೆ ಆದ್ರೂ ನೀರು ಹೋಗ್ತಿದೆ. ತಕ್ಷಣವೇ ರೈತರ ನೆರವಿಗೆ ಸರ್ಕಾರ ನಿಲ್ಲಿ, ಕಾವೇರಿ ನೀರನ್ನ ಉಳಿಸಿಕೊಳ್ಳಲು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.