Monday, April 21, 2025
Google search engine

Homeಅಪರಾಧಟ್ರ್ಯಾಕ್ಟರ್ ಬಸ್ ಅಪಘಾತ: ೨೦ಕ್ಕೂ ಹೆಚ್ಚು ಜನರಿಗೆ ಗಾಯ

ಟ್ರ್ಯಾಕ್ಟರ್ ಬಸ್ ಅಪಘಾತ: ೨೦ಕ್ಕೂ ಹೆಚ್ಚು ಜನರಿಗೆ ಗಾಯ

ವಿಜಯಪುರ: ಟ್ರ್ಯಾಕ್ಟರ್ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ೨೦ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಇಂಡಿ ತಾಲೂಕಿನ ಝಳಕಿ ಬಳಿ ಈ ಘಟನೆ ನಡೆದಿದೆ. ಈ ವೇಳೆ ೨೦ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಅಪಘಾತ ನಡೆದು ೨ ಗಂಟೆಗಳ ಬಳಿಕ ಆಂಬುಲೆನ್ಸ್ ಸ್ಥಳಕ್ಕೆ ಬಂದ ಹಿನ್ನೆಲೆಯಲ್ಲಿ ಜನರು ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣವೇ ಗಾಯಾಳುಗಳನ್ನ ಆಂಬುಲೆನ್ಸ್ ನಲ್ಲಿ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಇಂಡಿ ತಾಲೂಕಿನ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular