ಮೈಸೂರು: ಭ್ರೂಣ ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ಮೈಸೂರಿನ ರಾಜೀವ್ ನಗರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮುಖ ಆರೋಪಿ ಚಂದನ್ ಬಲ್ಲಾಳ್ ಮಾಲೀಕತ್ವದ ಮಾತಾ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಮಂಜುಳಾ ಎಂಬವರೇ ಬಂಧಿತ ಆರೋಪಿ.
ಬೆಂಗಳೂರು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಭ್ರೂಣಲಿಂಗ ಪತ್ತೆ ಮಾಡಿ, ಹತ್ಯೆಗೈಯುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದು, ಈವರೆಗೂ ೧೦ ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಭ್ರೂಣಲಿಂಗ ಹತ್ಯೆ ಪ್ರಕರಣವನ್ನು ಪೊಲೀಸರು ಬೆನ್ನತ್ತುತ್ತಿದ್ದಂತೆಯೇ ಮಂಜುಳ, ಮಾತಾ ಆಸ್ಪತ್ರೆಯಲ್ಲಿ ಕೆಲಸ ಬಿಟ್ಟು, ಬೇರೆ ಆಸ್ಪತ್ರೆಗೆ ಸೇರಿದ್ದರು. ಆಕೆಗಾಗಿ ಹುಡುಕಾಟ ಮುಂದುವರೆಸಿದ್ದ ಪೊಲೀಸರು, ಮೈಸೂರಿನ ರಾಜೀವ್ ನಗರದಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.