ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಬಾಮೈದ ಅಂದರೆ ಪತ್ನಿಯ ಸಹೋದರ ಡಾ ಪ್ರಭುಲಿಂಗ ಅವರ ಮನೆ ಮತ್ತು ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಯಾದಗೀರಿ ಜಿಲ್ಲೆಯ ಜಿಲ್ಲಾ ಆರೋಗ್ಯ ಅಧಿಕಾರಿಯಾಗಿರುವ ಡಾ: ಪ್ರಭುಲಿಂಗ ಮಾನಕರ್ ಅವರ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯ ಮಹಾಲಕ್ಷ್ಮಿ ಗ್ರೀನ್ಸ್ ಅಪಾರ್ಟ್ಮೆಂಟ್ ನಲ್ಲಿರುವ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಲಾಗಿದೆ. ೧೩ ಅಧಿಕಾರಿಗಳಿಗೆ ಸೇರಿದ ೬೩ ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿ ಬೆಂಗಳೂರಿನಲ್ಲಿ ೩ ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಸುಮಾರು ೨೦೦ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ.