ಹಾಸನ: ಮೈಸೂರು ದಸರಾ ಉತ್ಸವದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಸಾಕಾನೆ ‘ಅರ್ಜುನ’ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಒಂಟಿಸಲಗ ದಾಳಿಯಿಂದ ಮೃತಪಟ್ಟ ಅರ್ಜುನ ಆನೆ ಅಂತ್ಯಕ್ರಿಯೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ಗ್ರಾಮದ ಬಳಿ ನಡೆಯುತ್ತಿದ್ದು ಆದರೆ ಇದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.
ದಬ್ಬಳ್ಳಿಕಟ್ಟೆ ಗ್ರಾಮದ ಬಳಿ ಅರ್ಜುನ ಆನೆಯ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಸ್ಮಾರಕ ಕಟ್ಟುವ ಸಲುವಾಗಿ ಬೇರೆಡೆ ಅಂತ್ಯಕ್ರಿಯೆ ಮಾಡುವಂತೆ ಆಗ್ರಹಿಸಿದ್ದಾರೆ.
ದರ ಮಧ್ಯೆ ಪ್ರವೇಶಿಸಿದ ಅರಮನೆ ಪುರೋಹಿತ ಪ್ರಾಹ್ಲಾದ್, ಆನೆ ಮೃತಪಟ್ಟ ಸ್ಥಳದಲ್ಲಿ ಅಂತ್ಯಕ್ರಿಯೆ ಆಗಬೇಕು. ಈಗಾಗಲೇ ಅರ್ಜನನಿಗೆ ನೋವಾಗಿದೆ. ಮತ್ತೆ ನೋವಾಗುವುದು ಬೇಡ ಎಂದು ಜನರಿಗೆ ಕೈಮುಗಿದು ಮನವಿ ಮಾಡಿದರು.
ಈ ವೇಳೆ ಪಟ್ಟು ಬಿಡದೇ ಪ್ರತಿಭಟನೆ ನಡೆಸಿದ ಸ್ಥಳೀಯರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.
ಅಂತ್ಯಕ್ರಿಯೆ ಸ್ಥಳದಲ್ಲಿ ಪ್ರತಿಭಟನೆ ತೀವ್ರ ಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಪ್ರಹಾರ ನಡೆಸಿದ್ದಾರೆ.