ಮಂಡ್ಯ: ಮಂಡ್ಯದಲ್ಲಿ ರೈತರ ಉಪವಾಸ ಸತ್ಯಾಗ್ರಹ ಮುಂದುವರೆದಿದ್ದು, ಕಾವೇರಿಗಾಗಿ ಕಳೆದ 11 ದಿನಗಳಿಂದ ರೈತರ ಉಪವಾಸ ನಡೆಯುತ್ತಿದೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ಇಂದಿನ ಉಪವಾಸ ಸತ್ಯಾಗ್ರಹಕ್ಕೆ ಮೈಸೂರಿನ ರೈತರು ಬೆಂಬಲ ಸೂಚಿಸಿದ್ದಾರೆ.
ಕಳೆದ 92 ದಿನಗಳಿಂದ ರೈತ ಹಿತರಕ್ಷಣಾ ಸಮಿತಿ ಧರಣಿಯೂ ನಡೆಯುತ್ತಿದೆ.
ಉಪವಾಶ ಸತ್ಯಾಗ್ರಹದಲ್ಲಿ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಶೇಷ ಅಧಿವೇಶನ ಕರೆದು ಕಾವೇರಿ ವಿಚಾರ ಚರ್ಚೆಗೆ ಆಗ್ರಹಿಸಿದ್ದು, ರೈತರಿಗೆ ಸಮರ್ಪಕವಾಗಿ ಬರ ಪರಿಹಾರ ನೀಡಲು ಒತ್ತಾಯಿಸಿದ್ದಾರೆ.