Tuesday, April 22, 2025
Google search engine

HomeUncategorizedರಾಷ್ಟ್ರೀಯಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ತಂದೆಯ ಶವ ಅನುಮಾನಸ್ಪದ ರೀತಿಯಲ್ಲಿ ಪತ್ತೆ

ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ತಂದೆಯ ಶವ ಅನುಮಾನಸ್ಪದ ರೀತಿಯಲ್ಲಿ ಪತ್ತೆ

ಛತ್ತೀಸ್‌ಗಢ: ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ಎಂದು ಹೆಸರಿಸಲಾದ ಅಸೀಮ್ ದಾಸ್ ಅವರ ತಂದೆಯ ಶವ ಛತ್ತೀಸ್‌ ಗಢದ ದುರ್ಗ್ ಜಿಲ್ಲೆಯ ಗ್ರಾಮವೊಂದರಲ್ಲಿ ಮಂಗಳವಾರ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಸುಶೀಲ್ ದಾಸ್ (62) ಅವರ ಶವ ಮಧ್ಯಾಹ್ನ ಅಂಡಾ ಪೊಲೀಸ್ ಠಾಣಾ ವ್ಯಾಪ್ತಿಯ ಅಚ್ಚೋಟಿ ಗ್ರಾಮದ ಬಾವಿಯಲ್ಲಿ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಿಂದ ಇದು ಆತ್ಮಹತ್ಯೆ ಎಂದು ತೋರುತ್ತದೆ ಎಂದು ದುರ್ಗದ ಹಿರಿಯ ಪೊಲೀಸ್ ಅಧೀಕ್ಷಕರಾದ ರಾಮ್ ಗೋಪಾಲ್ ಗಾರ್ಗ್ ತಿಳಿಸಿದ್ದಾರೆ.

ಸುಶೀಲ್ ದಾಸ್ ಅವರು ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿಯಾಗಿರುವ ಆಸಿಮ್ ದಾಸ್ ಅವರ ತಂದೆಯಾಗಿದ್ದಾರೆ. ಇವರು ಖಾಸಗಿ ಕಂಪನಿಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದ್ದು ಕಳೆದ ಭಾನುವಾರ ಸಂಜೆಯಿಂದ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿತ್ತು ಎಂದು ಗಾರ್ಗ್ ತಿಳಿಸಿದ್ದಾರೆ.

ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ತೋರುತ್ತದೆ, ಆದರೆ ಸಾವಿನ ಹಿಂದಿನ ನಿಖರವಾದ ಕಾರಣವ ಇನ್ನು ಪತ್ತೆಹಚ್ಚಬೇಕಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಆ ಬಳಿಕವೇ ನಿಖರ ಕಾರಣ ತಿಳಿದು ಬರಬೇಕಾಗಿದೆ.

RELATED ARTICLES
- Advertisment -
Google search engine

Most Popular