Tuesday, April 22, 2025
Google search engine

Homeರಾಜ್ಯಸುದ್ದಿಜಾಲಸಿಡಾಕ್‌ನಿಂದ ಮಹಿಳಾ ಸ್ವ-ಸಹಾಯ ಗುಂಪಿನ ಸದಸ್ಯರಿಗೆ ತರಬೇತಿ ಕಾರ್ಯಕ್ರಮ

ಸಿಡಾಕ್‌ನಿಂದ ಮಹಿಳಾ ಸ್ವ-ಸಹಾಯ ಗುಂಪಿನ ಸದಸ್ಯರಿಗೆ ತರಬೇತಿ ಕಾರ್ಯಕ್ರಮ

ಕೊಪ್ಪಳ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಸಂಜೀವಿನಿ-ಕೆ.ಎಸ್.ಆರ್. ಎಲ್.ಪಿ.ಎಸ್. ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಇಂದು ಮಹಿಳಾ ಸ್ವ-ಸಹಾಯ ಗುಂಪಿನ ಸದಸ್ಯರುಗಳಿಗೆ ಆರು ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಸಿಡಾಕ್‌ನ ಅಕ್ಷತಾ. ಜಿ., ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಅಂಬಣ್ಣ, ಸಂಪನ್ಮೂಲ ವ್ಯಕ್ತಿಗಳಾದ ಸಿದ್ದಪ್ಪ ಗುಡ್ಡೋಡಗಿ, ಎನ್‌ಆರ್‌ಎಲ್‌ಎಂ ಸಿಬ್ಬಂದಿಗಳಾದ ವೆಂಕಟೇಶ, ಸವಿತಾ ಸಿಂದೋಗಿ, ಸಿಡಾಕ್ ತರಬೇತಿದಾರರಾದ ನಾಗರಾಜ ಡಿ. ಮುಧೋಳ, ಸೇರಿದಂತೆ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular