ಮಂಡ್ಯ: ಡಾ.ಬಿ.ಆರ್ ಅಂಬೇಡ್ಕರ್ 67ನೇ ಪರಿನಿಬ್ಬಾಣ ದಿನ ಹಿನ್ನಲೆ ಮಂಡ್ಯ ಜಿಲ್ಲಾಡಳಿತದ ವತಿಯಿಂದ ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಾಯಿತು.
ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಡಿಸಿ ಡಾ.ಕುಮಾರ್ ಮಾಲಾರ್ಪಣೆ ಮಾಡಿದರು.
ಇದೇ ವೇಳೆ ಜೊತೆ ವಿವಿಧ ಸಂಘಟನೆಗಳು ಹಾಗೂ ಪಕ್ಷದ ಮುಖಂಡರಿಂದಲೂ ಮಾಲಾರ್ಪಣೆ ಮಾಡಲಾಯಿತು.

ಬಳಿಕ ಜಿಲ್ಲಾಡಳಿತ, ಜಿ.ಪಂ, ವತಿಯಿಂದ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಜಿಲ್ಲಾಧಿಕಾರಿಗಳು ಪುಷ್ಪಾರ್ಚನೆ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ಭಾರತ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ. ಭಾರತ ದೇಶಕ್ಕೆ ಸಂವಿಧಾನ ನೀಡಿದ ಅಂಬೇಡ್ಕರ್ ಅವರ ಪರಿನಿಬ್ಬಾಣದ ದಿನ. ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಅರ್ಪಿಸಿ ಗೌರವ ನಮನ ಸಲ್ಲಿಸಿದ್ದೇವೆ. ಅಂಬೇಡ್ಕರ್ ಅವರು ಭಾರತ ದೇಶದ ಜನರಿಗೆ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಟ್ಟಿದ್ದಾರೆ. ಈ ಮೂಲಕ ಭಾರತದಲ್ಲಿ ಶೋಷಣೆ ಮುಕ್ತವಾಗಿ ಇರುವುದಕ್ಕೆ ಅವಕಾಶ ಮಾಡಿಕೊಟ್ಟು ದೇಶದ ಜನರ ಕಣ್ಣಾಗಿದ್ದಾರೆ ಎಂದರು.

ಅಂಬೇಡ್ಕರ್ ಅವರ ಮೌಲ್ಯ, ಚಿಂತನೆಗಳನ್ನು ಅಳವಡಿಸಿಕೊಂಡು ಅವರ ದಾರಿಯಲ್ಲಿ ನಡೆಯಬೇಕು . ಜೊತೆಗೆ ನಮ್ಮ ಮುಂದಿನ ಪೀಳಿಗೆಗೂ ಕೂಡ ಅವರ ಚಿಂತನೆಯನ್ನು ತಿಳಿಸಿ ಮಾದರಿಯಾಗೋಣ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಎಸ್ಪಿ ಎನ್.ಯತೀಶ್,ಸಿ ಇಓ ಶೇಖ್ ತನ್ವಿರ್ ಆಸೀಫ್, ಎಡಿಸಿ ನಾಗರಾಜ್ ಭಾಗಿಯಾಗಿದ್ದರು.