ಬೆಂಗಳೂರು: ಎಂ ಎಂ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ವಿಶೇಷ ನ್ಯಾಯಾಲಯ ರಚನೆ ಜೊತೆ ಪೂರ್ಣವಧಿ ನ್ಯಾಯಾಧೀಶರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸರ್ಕಾರದ ಅಪಾರ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ಮೂಲಕ ಸೂಚಿಸಿದ್ದಾರೆ.
ಎಂ.ಎಂ.ಕಲಬುರ್ಗಿ 2015ರ ಆ.31ರಂದು ಧಾರವಾಡದ ಅವರ ಸ್ವಗೃಹದಲ್ಲಿ ಹತ್ಯೆಯಾಗಿ ಏಳು ವರ್ಷಗಳು ಪೂರ್ಣಗೊಂಡಿವೆ. ಪ್ರಕರಣದ ಸಂಬಂಧ 2018-19ರಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಮೃತರ ಕುಟುಂಬದವರ ವಿಚಾರಣೆಗಳು ಪೂರ್ಣಗೊಂಡಿದ್ದರೂ ನ್ಯಾಯಾಲಯದಲ್ಲಿ ವಿಚಾರಣೆಗಳು ಮುಂದುವರಿದಿವೆ.
ಈಗಾಗಲೇ ಸಾಕಷ್ಟು ಸಮಯ ಆಗಿರುವುದರಿಂದ ವಿಶೇಷ ನ್ಯಾಯಾಲಯ ರಚಿಸುವಂತೆ ಮೃತರ ಪತ್ನಿ ಉಮಾದೇವಿ ಎಂ.ಕಲಬುರ್ಗಿ ಕೋರಿದ್ದು, ಈ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.