ಮಂಗಳೂರು(ದಕ್ಷಿಣ ಕನ್ನಡ): ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿಯ ಡಿವೈಡರ್ ಮೇಲೆ ಹತ್ತಿ ಪಾದಚಾರಿ ಮಾರ್ಗದ ಪಕ್ಕದಲ್ಲಿನ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ಜಂಕ್ಷನ್ ಬಳಿ ಈ ಘಟನೆ ನಡೆದಿದೆ.
ಸಂಚಾರ ಪೊಲೀಸ್ ಸಿಬ್ಬಂದಿ ಸೇರಿ ಮೂವರು ಗಾಯಗೊಂಡಿದ್ದಾರೆ.

ಲಾರಿ ಚಾಲಕನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಿಂದ ಸ್ಕೂಟರ್ ಸವಾರ ಉತ್ತರ ಕರ್ನಾಟಕ ಮೂಲದ ಬಪ್ಪನಾಡು ಬಳಿ ರೆಸಿಡೆನ್ಸಿಯೊಂದರ ವಾಚ್ ಮ್ಯಾನ್ ಸಂಗಪ್ಪ(57) ಗಂಭೀರ ಗಾಯಗೊಂಡು ಮುಕ್ಕ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಳಿದಂತೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಗೀತಾ (42), ಆಟೋ ಚಾಲಕ ಧರ್ಮೇಂದ್ರ (35) ಗಾಯಗೊಂಡು ಮುಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.