Monday, April 21, 2025
Google search engine

HomeUncategorizedರಾಷ್ಟ್ರೀಯಯಥಾಸ್ಥಿತಿ ಕಾಯ್ದುಕೊಂಡ ರೆಪೋ ದರ: ಆರ್ ಬಿಐ

ಯಥಾಸ್ಥಿತಿ ಕಾಯ್ದುಕೊಂಡ ರೆಪೋ ದರ: ಆರ್ ಬಿಐ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ಸತತ ಐದನೇ ಬಾರಿ ರೆಪೋ ದರದ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ.

ಆರ್‌ ಬಿಐನ ಹಣಕಾಸು ನೀತಿ ಸಮಿತಿ ಸತತ ಐದನೇ ತಿಂಗಳಿನಲ್ಲಿಯೂ ಶೇ.6.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್ ಆಫ್‌ ಇಂಡಿಯಾ ಶುಕ್ರವಾರ ತಿಳಿಸಿದೆ.

ಆರ್‌ ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್‌ 6ರಂದು ಆರಂಭಗೊಂಡಿದ್ದ ಮೂರು ದಿನಗಳ ಕಾಲದ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮಧ್ಯಮ ಆರ್ಥಿಕ ಸ್ಥಿರತೆ ಮತ್ತು ಆರ್ಥಿಕ ಬೆಳವಣಿಗೆ ಬಗ್ಗೆ ನಿಗಾ ಇರಿಸಿದ್ದು, ಹಣದುಬ್ಬರವನ್ನು ಪರಿಶೀಲಿಸಲಾಗುತ್ತಿದೆ ಎಂದು ಆರ್‌ ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಶೇ.6.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಒಮ್ಮತದ ನಿರ್ಧಾರ ತೆಗೆದುಕೊಂಡಿರುವುದಾಗಿ ದಾಸ್‌ ಹೇಳಿದರು.

ಹಣದುಬ್ಬರದ ಕುರಿತು ನಿಗಾ ಇರಿಸಿದ್ದು, ತುರ್ತು ಸಂದರ್ಭದಲ್ಲಿ ವಿಶೇಷ ಸಭೆ ಕರೆದು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಕ್ತಿಕಾಂತ್‌ ದಾಸ್‌ ಈ ಸಂದರ್ಭದಲ್ಲಿ ತಿಳಿಸಿದರು.

RELATED ARTICLES
- Advertisment -
Google search engine

Most Popular