ಕೊಪ್ಪಳ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಸಂಜೀವಿನಿ- ಕೆ.ಎಸ್.ಆರ್.ಎಲ್.ಪಿ.ಎಸ್. ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಮಹಿಳಾ ಸ್ವ-ಸಹಾಯ ಗುಂಪಿನ ಸದಸ್ಯರುಗಳಿಗೆ ಹಮ್ಮಿಕೊಂಡಿದ್ದ ಆರು ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಇಂದು ನಗರದ ತಲೂಕ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಿಡಾಕ್‌ನ ಅಕ್ಷತಾ. ಜಿ., ವಲಯ ಮೇಲ್ವಿಚಾರಕರಾದ ವೆಂಕಟೇಶ, ರಾಜಭೂಮಿ ಸ್ಪೆಸಸ್‌ನ ನಿರ್ದೇಶಕ ಅಕ್ಷಯ, ಎನ್‌ಆರ್‌ಎಲೆಂ ಸಿಬ್ಬಂದಿ, ಸಿಡಾಕ್ ತರಬೇತುದಾರರಾದ ನಾಗರಾಜ ಡಿ.ಮುಧೋಳ ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದೇ ಸಂದರ್ಭ ತರಬೇತಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.