Sunday, April 20, 2025
Google search engine

Homeಅಪರಾಧಕಲಬುರಗಿಯಲ್ಲಿ ವಕೀಲನ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಕಲಬುರಗಿಯಲ್ಲಿ ವಕೀಲನ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಕಲಬುರಗಿ: ಕಲಬುರಗಿಯಲ್ಲಿ ವಕೀಲ ಈರಣ್ಣ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ವಿಶ್ವವಿದ್ಯಾಲಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಅವ್ವಣ್ಣಾ ನಾಯಿಕೊಡಿ, ಮಲ್ಲಿನಾಥ್ ನಾಯಿಕೊಡಿ‌, ಭಾಗೇಶ್ ಬಂಧಿತ ಆರೋಪಿಗಳು. ಮತ್ತೊಬ್ಬ ಪ್ರಮುಖ ಆರೋಪಿಗಾಗಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.

ಬಂಧಿತ ಆರೋಪಿಗಳು ಕಲಬುರಗಿ ಲಾಡ್ಜ್ ನಲ್ಲಿ ಉಳಿದುಕೊಂಡು ನಾಲ್ಕು ದಿನದಿಂದ ಈರಣ್ಣಗೌಡ ಕೊಲೆಗೆ ಹೊಂಚು ಹಾಕಿದ್ದರು. ಸಾಕಷ್ಟು ಬಾರಿ ಕೋರ್ಟ್ ಹಾಗೂ ಮನೆ ಬಳಿ ಹೋಗಿ ಹತ್ಯೆಗೆ ಪ್ರಯತ್ನಿಸಿದ್ದರು ಎಂದು ತಿಳಿದುಬಂದಿದ್ದು, ಹತ್ಯೆಗೆ ಕಾರಣವೇನು ಎನ್ನುವುದನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ನಿನ್ನೆ(ಡಿಸೆಂಬರ್ 07) ಈರಣ್ಣಗೌಡ ಕೋರ್ಟ್​ಗೆ ಹೋಗುವ ಸಂದರ್ಭದಲ್ಲಿ ಕಲಬುರಗಿ ನಗರದ ಸಾಯಿ ಮಂದಿರ ಬಳಿಯಿರುವ ಅಪಾರ್ಟ್ಮೆಂಟ್ ಬಳಿ ಹಾಡುಗಲೇ ವಕೀಲ ಈರಣ್ಣಗೌಡನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು.

ಪ್ರಕರಣ ಸಂಬಂಧ ವಿಶ್ವವಿದ್ಯಾಲಯ ಠಾಣೆಯಲ್ಲಿ ನೀಲಕಂಠ ಪೊಲೀಸ್ ಪಾಟೀಲ್, ವಿಜಯಕುಮಾರ್, ಸಿದ್ದಣ್ಣಗೌಡ ಸಿದ್ರಾಮ್, ಅವ್ವಣ್ಣ, ಗುರು ಎಂಬುವವರ ವಿರುದ್ಧ ಎಫ್​ಐಆರ್ ದಾಖಲಾಗಿತ್ತು.

RELATED ARTICLES
- Advertisment -
Google search engine

Most Popular