Monday, April 21, 2025
Google search engine

Homeಸಿನಿಮಾಅಂಬೇಡ್ಕರ್ ಮೈದಾನದಲ್ಲಿ ನಟಿ ಲೀಲಾವತಿ ಪಾರ್ಥಿವ ಶರೀರ: ಸಾರ್ವಜನಿಕರಿಂದ ಅಂತಿಮ ದರ್ಶನ

ಅಂಬೇಡ್ಕರ್ ಮೈದಾನದಲ್ಲಿ ನಟಿ ಲೀಲಾವತಿ ಪಾರ್ಥಿವ ಶರೀರ: ಸಾರ್ವಜನಿಕರಿಂದ ಅಂತಿಮ ದರ್ಶನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ (ನಿನ್ನೆ) ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದು, ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ಲೀಲಾವತಿ ಅವರ ಪಾರ್ಥಿವ ಶರೀರ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಮತ್ತು ಅವರು ಹಿತೈಷಿಗಳು ಬಂದು ದರ್ಶನ ಪಡೆಯುತ್ತಿದ್ದಾರೆ.

ಇಂದು ಬೆಳಗ್ಗೆ ೫:೩೦ಕ್ಕೆ ನೆಲಮಂಗಲದ ಡಾ.ಆರ್.ಅಂಬೇಡ್ಕರ್ ಅವರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿನೋದ್ ರಾಜ್ ಅವರ ಒಪ್ಪಿಗೆ ಮೇರೆಗೆ ೧೧ ಗಂಟೆಯಿಂದ ೨:೩೦ ರವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಬಯಲು ರಂಗಮಂದಿರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಸಂಜೆ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಅವರ ತೋಟದಲ್ಲಿ ಸರ್ಕಾರಿ ಸಕಲ ಗೌರವದೊಂದಿಗೆ ಅಂತಿಮ ಸಂಸ್ಕಾರ ಮಾಡುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್ ತಿಳಿಸಿದ್ದಾರೆ. ನೆಲಮಂಗಲದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮಗ ವಿನೋದ್ ರಾಜ್ ಸೇರಿದಂತೆ ಕುಟುಂಬದ ಹಿತೈಷಿಗಳು ಸ್ಥಳದಲ್ಲಿ ಹಾಜರಿದ್ದಾರೆ.

ಲೀಲಾವತಿ ಅಂತ್ಯಕ್ರಿಯೆ ಕುರಿತು ಮಗ ವಿನೋದ್ ರಾಜ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಅಂಬೇಡ್ಕರ್ ಮೈದಾನ ಬಳಿಕ ೧೧ ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಇರಿಸಲಾಗುತ್ತದೆ. ಅಂತ್ಯಸಂಸ್ಕಾರವನ್ನು ಸೋಲದೇವನಹಳ್ಳಿ ತೋಟದ ಮನೆಯಲ್ಲಿ ನಡೆಸಲಾಗುತ್ತೆ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular