ದಾವಣಗೆರೆ: ನಗರದ ಪಿ.ಬಿ ರಸ್ತೆಯಿಂದ ಮಾಗಾನಹಳ್ಳಿ ರಸ್ತೆಯವರೆಗೆ ರಿಂಗ್ ರಸ್ತೆ ನಿರ್ಮಾಣ ಮಾಡಲು ರಾಮಕೃಷ್ಣ ಹೆಗಡೆ ನಗರದಲ್ಲಿನ ವಸತಿ ರಹಿತ ಒತ್ತುವರಿದಾರರನ್ನು ತೆರವು ಗೊಳಿಸಿ, ದೊಡ್ಡಬಾತಿ ಸಮೀಪದಲ್ಲಿರುವ ಖಾಲಿ ಜಾಗದಲ್ಲಿ ತಾತ್ಕಾಲಿಕ ಶೆಡ್ ನಿರ್ಮಿಸಿ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಿದ್ದು, ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಅವರೊಂದಿಗೆ ದಾವಣಗೆರೆ ದಕ್ಷಿಣಾ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು ಇಂದು ಸ್ಥಳ ಪರೀಶಿಲನೆ ನಡೆಸಿ ಮೂಲಭೂತ ಸೌಲಭ್ಯ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು. ಹಾಗೂ ಅಲ್ಲಿನ ನಿವಾಸಿಗಳಿಗೆ ಉಪಹಾರ ಉಣಬಡಿಸಿದರು.