Saturday, April 19, 2025
Google search engine

Homeರಾಜ್ಯಸುದ್ದಿಜಾಲಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ

ಮೈಸೂರು: ಪ್ರತಿಭಾವಂತರು ಸದ್ಗುಣವಂತರೂ ಆಗಬೇಕು. ಪೋಷಕರನ್ನು ಗೌರವಿಸುವ ಮೂಲಕ ಪಡೆದ ಶಿಕ್ಷಣದ ಗೌರವವನ್ನು ಎತ್ತಿಹಿಡಿಯಬೇಕೆಂದು ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ.ಎನ್. ಮಂಜೇಗೌಡ ರವರು ಮಕ್ಕಳಿಗೆ ಕಿವಿಮಾತು ಹೇಳಿದರು. ಅವರು ಇಂದು ಮೈಸೂರಿನ ಮಹಾರಾಜ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ಹಳ್ಳಿ ಪ್ರತಿಭೆಗಳು ದಿಲ್ಲಿಯತ್ತ ಹೆಜ್ಜೆ ಇಡಲು ಇಂತಹ ಪ್ರತಿಭಾಕಾರಂಜಿ ಕಾರ್ಯಕ್ರಮಗಳು ಉತ್ತಮ ವೇದಿಕೆ ಒದಗಿಸುತ್ತವೆ ಎಂದರು.ಇದೇ ಸಂದರ್ಭದಲ್ಲಿ ಆನ್ ಲೈನ್ ನಲ್ಲಿ ನಡೆದ ರಾಜ್ಯ ಮಟ್ಟದ ಕಲೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಹಂತವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿರುವ ಐವರು ವಿದ್ಯಾರ್ಥಿಗಳನ್ನು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗೌರವಿಸಲಾಯಿತು.

ರಾಷ್ಟ್ರೀಯ ಹಂತದ ಆನ್ಲೈನ್ ಕಲೋತ್ಸವಕ್ಕೆ ಆಯ್ಕೆಯಾದವರ ವಿವರ:

ಹೆಚ್.ಡಿ.ಕೋಟೆ ತಾಲೂಕು ಜಿ.ಬಿ.ಸರಗೂರಿನ ಸರ್ಕಾರಿ ಪ್ರೌಢಶಾಲೆಯ ಅನುಷಾ 3D ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಟಿ ನರಸೀಪುರ ತಾಲ್ಲೂಕಿನ ಮುಸುಕಿನ ಕೊಪ್ಪಲು ಸರ್ಕಾರಿ ಪ್ರೌಢಶಾಲೆಯ ರಕ್ಷಿತಾ 2D ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಭಾಸ್ಕರ್ ಶಾಸ್ತ್ರೀಯ ನೃತ್ಯ ವಿಭಾಗದಲ್ಲಿ ಪ್ರಥಮ ಸ್ಥಾನ, ಯತೀಶ್ ಕುಮಾರ್ ರವರು ನಂಜನಗೂಡು ತಾಲೂಕಿನ ಜೆಎಸ್ಎಸ್ ಪ್ರೌಢಶಾಲಾ ವಿದ್ಯಾರ್ಥಿಯಾಗಿ ತಾಳವಾದ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮೈಸೂರು ಉತ್ತರ ವಲಯದ ಪೊಲೀಸ್ ಪಬ್ಲಿಕ್ ಶಾಲೆಯ ತನ್ಮಯ್ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರೀಯ ಹಂತದ ಕಲೋತ್ಸವ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ. ಕಾರ್ಯಕ್ರಮದಲ್ಲಿ ಹಿರಿಯ ಪ್ರಾಥಮಿಕ ವಿಭಾಗದಲ್ಲಿ 16 ವಿವಿಧ ಸ್ಪರ್ಧೆಗಳಲ್ಲಿ 144 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸರ್ಕಾರಿ ಪ್ರೌಢಶಾಲೆಯ ವಿಭಾಗದಲ್ಲಿ 17 ವೈಯಕ್ತಿಕ ಸ್ಪರ್ಧೆಗಳಲ್ಲಿ 153 ವಿದ್ಯಾರ್ಥಿಗಳು,
3 ಸಾಮೂಹಿಕ ಸ್ಪರ್ಧೆಗಳಲ್ಲಿ 162 ವಿದ್ಯಾರ್ಥಿಗಳು ಭಾಗವಹಿಸಿದ್ದರು. (ವಿಜೇತ ವಿದ್ಯಾರ್ಥಿಗಳ ಪಟ್ಟಿ ಪ್ರತ್ಯೇಕ ನೀಡಿದೆ) ವೇಷಭೂಷಣ ಸ್ಪರ್ಧೆಗಲ್ಲಿ ಭಾಗವಹಿಸಿದ್ದ ಮಕ್ಕಳಲ್ಲಿ ತಿರುಪತಿ ತಿಮ್ಮಪ್ಪ, ಶಬರಿಮಲೆ ಅಯ್ಯಪ್ಪ, ಉಗ್ರ ನರಸಿಂಹ, ಶನಿಪರಮಾತ್ಮ, ಶ್ರೀರಾಮ, ಶ್ರವಣಕುಮಾರ, ಮೊದಲಾದ ವೇಷಭೂಷಣಗಳು ಎಲ್ಲರ ಮನಸೂರೆಗೊಂಡವು. ಜಾನಪದ ನೃತ್ಯ, ಸಾಮೂಹಿಕ ನೃತ್ಯಗಳಲ್ಲಿ ಅಭಿನಯಿಸಿದ ಮಕ್ಕಳಂತೂ ವೃತ್ತಿಪರ ಕಲಾವಿದರನ್ನು ನಾಚಿಸುವಂತೆ ವಾದ್ಯಗಳನ್ನು ಭಾರಿಸುವ ಮೂಲಕ ಎಲ್ಲರನ್ನು ಚಕಿತಗೊಳಿಸಿದರು.

ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆದವು. ಮಾನ್ಯ ಉಪನಿರ್ದೇಶಕರ ಕಚೇರಿಯ ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿ.ಆರ್.ಸಿ ರವರು, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರು ಎಲ್ಲರೂ ಕಾರ್ಯಕ್ರಮದಲ್ಲಿ ಶಿಸ್ತಿನಿಂದ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಿಲಾಖೆಯ ಮೈಸೂರು ಜಿಲ್ಲೆ ಉಪನಿರ್ದೇಶಕರಾದ ಶ್ರೀ ಪಾಂಡು ರವರು, ಡಯಟ್‌ ಪ್ರಾಚರ್ಯರಾದ ಶ್ರೀ ಸಿ.ಎನ್.‌ ನಾಗರಾಜಯ್ಯನವರು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಗೋವಿಂದ ರಾಜು ರವರು, ಜಿಲ್ಲಾ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣರವರು, ಕಾರ್ಯದರ್ಶಿ ಪ್ರಶಾಂತ್‌ ಎಂ.ಸಿ ರವರು, ರಾಜ್ಯ ಮುಖ್ಯೋಪಾಧ್ಯಾಯರು ಹಾಗು ಪ್ರಾಂಶುಪಾಲರು ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಮಹದೇವಯ್ಯ ನವರು, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೆ.ಬಿ.ಸೋಮೆಗೌಡರವರು, ಪ್ರೌಢಶಾಲೆಯ ಸಹಶಿಕ್ಷಕರ ಸಂಘದ ಅಧ್ಯಕ್ಷರಾದ ಸಿ.ಬಿ.ಅರುಣ್‌ ಕುಮಾರ್‌ ರವರು, ಲಿಪಿಕ ನೌಕರರ ಸಂಘದ ಜಯಕಾಂತ ರವರು, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಜಿ ನಾಗೇಶ್‌ ರವರು, ರಾಜೇಂದ್ರರವರು, ಬಡ್ತಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷರಾದ ದುಂಡಯ್ಯನವರು, ಎಸ್.‌ಸಿ, ಎಸ್.ಟಿ ಪ್ರಾಥಮಿಕ ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಟಿ.ಸಿ.ಕೃಷ್ಣಮೂರ್ತಿರವರು, ಸೇರಿದಂತೆ ಶಾಲಾ ಶಿಕ್ಷಣ ಇಲಾಖೆಯ ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular