Saturday, April 19, 2025
Google search engine

Homeಅಪರಾಧಮಹಿಳೆಯನ್ನು ಬೆತ್ತಲುಗೊಳಿಸಿ ಮೆರವಣಿಗೆ: ಬೆಳಗಾವಿಯಲ್ಲಿ ಅಮಾನವೀಯ ಘಟನೆ

ಮಹಿಳೆಯನ್ನು ಬೆತ್ತಲುಗೊಳಿಸಿ ಮೆರವಣಿಗೆ: ಬೆಳಗಾವಿಯಲ್ಲಿ ಅಮಾನವೀಯ ಘಟನೆ

ಬೆಳಗಾವಿ: ಪ್ರೀತಿಸಿದ ಜೋಡಿ ಮನೆ ಬಿಟ್ಟು ಹೋಗಿದ್ದರಿಂದ ಯುವಕನ ತಾಯಿಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಿರುವ ಅಮಾನವೀಯ ಘಟನೆ ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

42 ವರ್ಷ ವಯಸ್ಸಿನ ಮಹಿಳೆ ಹಲ್ಲೆಗೆ ಒಳಗಾದವರು.

ಯುವತಿಯ ಕುಟುಂಬಸ್ಥರು ಮಹಿಳೆಯನ್ನು ಕಂಬಕ್ಕೆ ಕಟ್ಟಿ ಬೆತ್ತಲೆ ಮಾಡಿ ಅಮಾನವೀಯವಾಗಿ ವರ್ತಿಸಿದ್ದಾರೆ.

ಯುವಕ ಮತ್ತು ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಯವತಿಗೆ ಬೇರೆ ವರನನ್ನು ನೋಡಿದ್ದು, ಇಂದು ನಿಶ್ಚಿತಾರ್ಥ ಹಮ್ಮಿಕೊಳ್ಳಲಾಗಿತ್ತು. ಮದುವೆಯನ್ನು ಸಹ ಕುಟುಂಬಸ್ಥರು ನಿಗದಿ ಮಾಡಿದ್ದರು. ಆದರೆ ನಿನ್ನೆ ರಾತ್ರಿ ಮನೆ ಬಿಟ್ಟು ಈ ಪ್ರೇಮಿಗಳು ಓಡಿ ಹೋಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಯುವತಿ ಕುಟುಂಬಸ್ಥರು ಯುವಕನ ಮನೆ ಮೇಲೆ ದಾಳಿ ಮಾಡಿ, ಮನೆಯನ್ನು ಸಂಪೂರ್ಣ ಧ್ವಂಸಗೊಳಿಸಿದ್ದಾರೆ. ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೇ ಗ್ರಾಮದಲ್ಲಿ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ್ದಾರೆ.

ತಡರಾತ್ರಿ ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಂಬಂಧ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಇಂದು ಬೆಳಗ್ಗೆ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಅವರು ಕೂಡ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಓಡಿ ಹೋಗಿರುವ ಯುವಕ, ಯುವತಿಗೆ ಪೊಲೀಸರ ಶೋಧ ಕಾರ್ಯ ಆರಂಭಿಸಿದ್ದಾರೆ. ಗ್ರಾಮದಲ್ಲಿ 2 ಕೆಎಸ್ ಆರ್ ಪಿ ತುಕಡಿ ಮತ್ತು ಪೊಲೀಸ್ ಬಂದೋಬಸ್ತ್​ ಅನ್ನು ಸಹ ನಿಯೋಜಿಸಲಾಗಿದೆ.

RELATED ARTICLES
- Advertisment -
Google search engine

Most Popular