Sunday, April 20, 2025
Google search engine

Homeರಾಜಕೀಯಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಬೆಳಕಿನ ಕ್ರೀಡೋತ್ಸವದಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಬೆಳಕಿನ ಕ್ರೀಡೋತ್ಸವದಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕ್ರೀಡೋತ್ಸವದಲ್ಲಿ ಭಾಷಣ ಮಾಡಿದ ಕುಮಾರಸ್ವಾಮಿ ಕೊನೆಗೆ ಜೈ ಶ್ರೀರಾಮ್ ಅಂತಾ ಘೋಷಣೆ ಕೂಗಿದ್ರು.

ಕ್ರೀಡೋತ್ಸವದ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಈ ಹಿಂದೆ ಪ್ರಭಾಕರ್ ಭಟ್ ಅವರ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಈ ಕಾರ್ಯಕ್ರಮ ನನ್ನ ಜೀವನದ ಅವಿಸ್ಮರಣೀಯ ಕ್ಷಣವಾಗಿದೆ. ಇಲ್ಲಿ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಕೊಡಲಾಗುತ್ತಿದೆ. ಈ‌ ಕಾರ್ಯಕ್ರಮ ಅಷ್ಟು ಸುಲಭವಾಗಿ ಮಾಡಲು ಸಾಧ್ಯವಿಲ್ಲ. ಗುರುಕುಲ ಪರಂಪರೆಯನ್ನು ಸಂಸ್ಕೃತಿಗಳನ್ನು ನೀಡಲಾಗುತ್ತಿದೆ. ಉತ್ತಮ ಶಿಸ್ತಿನ ಬದಕನ್ನು ಕಲಿಸಲಾಗುತ್ತಿದೆ ಎಂದರು.

ಮಾನವೀಯತೆ ವಿಕಸನವನ್ನು ಇಲ್ಲಿ ನೀಡಲಾಗುತ್ತದೆ. ಈ‌ ಕಾರ್ಯಕ್ರಮಕ್ಕೆ ಬಾರದೇ ಇದ್ದರೆ ಜೀವನದ ದೊಡ್ಡ ನಷ್ಟವಾಗುತ್ತಿತ್ತು. ಗ್ರಾಮೀಣ ಪ್ರದೇಶದ ಕಲೆಗಳನ್ನು ಮಕ್ಕಳಲ್ಲಿ ಮಾಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಚಂದ್ರಯಾನ ಉಡಾವಣೆಯನ್ನು ಕಣ್ಣಿಗೆ ಕಟ್ಟುವ ಹಾಗೆ ತೋರಿಸಿದ್ದೀರಿ. ಬಾಲ್ಯದಲ್ಲಿ ರಾಮನ ಭಜನೆ ಮಾಡಿದನ್ನು ಇವತ್ತು ಮತ್ತೆ ನೆನಪಿಸಿದ್ದೀರಿ. ಪ್ರಭಾಕರ್ ಭಟ್ ಬದುಕಿನ ಒಳ್ಳೆಯ ನಡವಳಿಕೆ ಕಲಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಕಣ್ಣು ತೆರೆಸುತ್ತಿದ್ದೀರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನೀವೆಲ್ಲಾ ಯೋಚನೆ ಮಾಡಬಹುದು ಕುಮಾರಸ್ವಾಮಿ ಹಿಂದೆ ಒಂದು ರೀತಿ ಮಾತನಾಡುತ್ತಿದ್ದರು. ಈಗ ಕಾರ್ಯಕ್ರಮ ಭಾಗವಹಿಸುತ್ತಿದ್ದೀರಿ ಅಂತಾ ನೀವು ಯೋಚಿಸಿರಬಹುದು. ನನನ್ನು ಕೆಲವರು ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು. ಇವತ್ತು ನನ್ನ ಕಣ್ಣು ತೆರೆದಿದೆ. ನನ್ನಲ್ಲಿ ತಪ್ಪುಗಳಾಗಿದೆ, ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಭಾಷಣದ ಕೊನೆಗೆ ಜೈ ಶ್ರೀರಾಮ್ ಘೋಷಣೆ ಕೂಗಿ ಕುಮಾರಸ್ವಾಮಿ ಭಾಷಣ ಮುಗಿಸಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಇಲ್ಲಿ ಎಲ್ಲಾ ಸ್ತರದ ಮಕ್ಕಳಿಗೆ ಉತ್ತಮ‌ ಶಿಕ್ಷಣ ನೀಡುತ್ತಿದ್ದಾರೆ. ಶಿಕ್ಷಣದ ಜೊತೆಗೆ ಮಾನಸಿಕ ದೈಹಿಕ ಸಾಮರ್ಥ್ಯವನ್ನು ಬೆಳಸುತ್ತಿದ್ದಾರೆ. ಆರ್‌ಎಸ್‌ಎಸ್‌ ಹಾಗೂ ಪ್ರಭಾಕರ್ ಭಟ್ ಅವರ ಕಾರ್ಯಕ್ರಮ ಬೇರೆ. ಆದರೆ ದೇಶದ ಅಭಿವೃದ್ಧಿಗೆ ಯಾವುದೇ ಸಂಘಟನೆ ಕೈ ಜೋಡಿಸಬೇಕು. ಸಾರ್ವಜನಿಕ ಜೀವನದಲ್ಲಿ ಟೀಕೆಗಳು ಸಾಮಾನ್ಯ. ಎಲ್ಲಾ ರಾಜಕೀಯ ಪಕ್ಷದವರೂ ಟೀಕೆ ಮಾಡುತ್ತಾರೆ. ಕೆಲವೊಂದು ಸಮಯದಲ್ಲಿ ಟೀಕೇಗಳು ಸರ್ವೇ ಸಾಮಾನ್ಯ. ಭಟ್ ಅವರ ಕೊಡುಗೆ ಇಲ್ಲಿಗೆ ಭೇಟಿ ನೀಡಿದ ಬಳಿಕ ಗೊತ್ತಾಗಿದ್ದು ಎಂದು ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರನ್ನು ಹೊಗಳಿದರು.

ಕನ್ನಡ ಶಿಕ್ಷಣಕ್ಕೆ ಅವರು ಉತ್ತಮ ಕೆಲಸ ಮಾಡಿದ್ದಾರೆ. ಹಲವರು ನನ್ನನ್ನು ದಾರಿ ತಪ್ಪಿಸಿದ್ರು ಅದ್ರಲ್ಲಿ ಕಾಂಗ್ರೆಸ್‌ನವರು ಇದ್ದರು. ನನ್ನ ನಡವಳಿಕೆ ರಾಜ್ಯಕ್ಕೆ ಒಳ್ಳೆದಾಗಬೇಕು ಎನ್ನುವುದು. ಎನ್‌ಡಿಎ ಜೊತೆ ಹೋಗೋದು ಈಗಾಗಲೇ ತೀರ್ಮಾನ ಆಗಿದೆ. ಮುಂದಿನ ದಿನದಲ್ಲಿ ಏನಾಗಲಿದೆ ಮುಂದೆ ಹೇಳುತ್ತೇನೆ. 2006ರಲ್ಲಿ ಬಿಜೆಪಿ ಜೊತೆ ಯಾವ ಸಂಬಂಧ ಇತ್ತೋ ಅದು ಹಾಗೇ ಇದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular