Monday, April 21, 2025
Google search engine

Homeರಾಜ್ಯಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ: ಸಂತ್ರಸ್ತೆಗೆ ಧೈರ್ಯ ತುಂಬಿದ ಸತೀಶ್ ಜಾರಕಿಹೊಳಿ

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ: ಸಂತ್ರಸ್ತೆಗೆ ಧೈರ್ಯ ತುಂಬಿದ ಸತೀಶ್ ಜಾರಕಿಹೊಳಿ

ಬೆಳಗಾವಿ: ತಾಲ್ಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ ಸಂಬಂಧಿಸಿದಂತೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಮಂಗಳವಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಮಹಿಳೆಗೆ ಧೈರ್ಯ ತುಂಬಿದರು.

ಸಂತ್ರಸ್ತ ಮಹಿಳೆ ಸಚಿವ ಸತೀಶ್‌ ಜಾರಕಿಹೊಳಿ ಅವರ ಎದುರು ನಡೆದ ಘಟನೆ ಬಗ್ಗೆ ತಮ್ಮ ಅಳಲು ತೋಡಿಕೊಂಡರು. ಆರೋಪಿಗಳಿಗೆ ತಕ್ಕ ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳಬೇಕು. ತಮಗೆ ಸೂಕ್ತ ನ್ಯಾಯ ಒದಗಿಸಬೇಕೆಂದು ಸಂತ್ರಸ್ತ ಮಹಿಳೆಯ ಕುಟುಂಬಸ್ಥರು ಸಚಿವರಿಗೆ ಮನವಿ ಮಾಡಿದರು.

ಸಂತ್ರಸ್ತ ಮಹಿಳೆ ಹಾಗೂ ಕುಟುಂಬಸ್ಥರ ಮನವಿ ಆಲಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ತಿಳಿಸುತ್ತೇನೆ ಎಂದು ಸಚಿವ ತಿಳಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಂದೆ ಬಸಪ್ಪ ನಾಯಕ, ಚಿಕ್ಕಪ್ಪರಾದ ರಾಜು ನಾಯಕ, ಯಲ್ಲಪ್ಪ ನಾಯಕ, ಯುವತಿ ಸಹೋದರರಾದ ಕೆಂಪಣ್ಣ, ಲಕ್ಕಪ್ಪ, ತಾಯಿ ಪಾರ್ವತಿ, ಗಂಗವ್ವ ವಾಲಿಕಾರ್, ಸಂಗೀತಾ ಹೆಗ್ಗನಾಯಕ, ಶೋಭಾ ನಾಯಕ, ಲಕ್ಕವ್ವ ನಾಯಕ, ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರು ಸೇರಿ 12 ಜನರ ವಿರುದ್ಧ ಕಾಕತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದರು

RELATED ARTICLES
- Advertisment -
Google search engine

Most Popular