Sunday, April 20, 2025
Google search engine

Homeರಾಜ್ಯಪಂಚಮಸಾಲಿ 2ಎ ಮೀಸಲಾತಿ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗದೊಂದಿಗೆ ಸಿಎಂ ಚರ್ಚೆ

ಪಂಚಮಸಾಲಿ 2ಎ ಮೀಸಲಾತಿ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗದೊಂದಿಗೆ ಸಿಎಂ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಂಚಮಸಾಲಿ 2ಎ ಮೀಸಲಾತಿ ಸಂಬಂಧಪಟ್ಟಂತೆ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ಸಮಾಜದ ನಾಯಕರ ನಿಯೋಗದ ಜತೆ ಚರ್ಚೆ ನಡೆಸಿದರು.

ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆ ಕಾನೂನು ತಜ್ಞರು ಮತ್ತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಹಾಗೂ ಅಡ್ವೊಕೇಟ್ ಜನರಲ್ ಅವರ ಜತೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ನಿಯೋಗಕ್ಕೆ ಭರವಸೆ ನೀಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ , ಹಿರಿಯ ಶಾಸಕರಾದ ಬಿ.ಆರ್.ಪಾಟೀಲ್ , ವಿಜಯಾನಂದ ಕಾಶಪ್ಪನವರ್, ಬಸವನಗೌಡ ಪಾಟೀಲ್ ಯತ್ನಾಳ್, ವಿನಯ್ ಕುಲಕರ್ಣಿ, ಸಿ.ಸಿ.ಪಾಟೀಲ್, ವಿಧಾನ‌ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ,  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಪಂಚಮಸಾಲಿ ಸಮಾಜದ ಹಲವು ಮುಖಂಡರು ನಿಯೋಗದಲ್ಲಿದ್ದರು.

RELATED ARTICLES
- Advertisment -
Google search engine

Most Popular