ಮೈಸೂರು: ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ಸಮನ್ವಯ ಸಭೆ ಆಯೋಜಿಸಲಾಗಿತ್ತು. ಇದೇ ಮೊದಲ ಬಾರಿ ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ ಮತ್ತು ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳ ಸಂಘಗಳ ಜೊತೆ ಸಮನ್ವಯ ಸಮಿತಿ ಸಭೆ ನಡೆಯಿತು.
ಮೈಸೂರು ಜಿಲ್ಲೆಯಲ್ಲಿರುವ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಆಗುವ ಹಲವಾರು ಸಮಸ್ಯೆಗಳನ್ನ ಸತತವಾಗಿ ಸುಮಾರು 4 ಗಂಟೆ ಗಳಿಗೂ ಹೆಚ್ಮುಕಾಲ ಮುಕ್ತ ವಾಗಿ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ಪ್ರಯತ್ನವನ್ನು ಮಾಡಲಾಯಿತು. ಸಭೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಅನುಭವಿಸುತ್ತಿರುವ ಕಷ್ಟಗಳ ಬಗ್ಗೆ ಸಿ ಓ ರವರಿಗೆ ಮನವರಿಕೆ ಮಾಡಿಕೊಡಲಾಯಿತು.
ಗ್ರಾಮ ಪಂಚಾಯತಿಗಳಲ್ಲಿ ಬೀದಿ ದೀಪ ಕುಡಿಯುವ ನೀರಿನ ಸಮಸ್ಯೆ ಗ್ರಂಥಾಲಯಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಗ್ರಾಮಗಳ ಅಭಿವೃದ್ಧಿಗೆ ಒತ್ತು ಕೊಡುವುದು ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಸರ್ಕಾರಿ ದಿಂದ ಹೆಚ್ಚು ಅನುದಾನವನ್ನ ಪಂಚಾಯಿತಿಯೊಳಗೆ ನೀಡುವುದರ ಬಗ್ಗೆ ಮತ್ತು ಸರ್ಕಾರಗಳು ಪಂಚಾಯಿತಿಗಳ ಮೇಲೆ ಅನಗತ್ಯವಾಗಿ ಏರುತ್ತಿರುವ ಆದೇಶಗಳನ್ನು ಹಿಂಪಡಿಯುವಂತೆ ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಪಡಿಸುವಂತೆ ಕಡು ಬಡವರಿಗೆ ಮನೆಗಳನ್ನು ನೀಡುವಂತೆ ಸ್ಥಳೀಯವಾಗಿ ಅಗತ್ಯವಿರುವ ಕಾಮಗಾರಿಗಳಿಗೆ ಹೆಚ್ಚು ಹೊತ್ತು ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಯಿತು.
ಜಿಲ್ಲಾ ಪಂಚಾಯತಿಯ ಅಧಿಕಾರಿಗಳು, ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳು , ಮೈಸೂರು ಜಿಲ್ಲೆಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ,ಮೈಸೂರು ಜಿಲ್ಲೆಯ ಎಲ್ಲ ತಾಲೂಕಿನ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.
