Saturday, April 19, 2025
Google search engine

Homeಅಪರಾಧಕಾಪು ಲೀಲಾಧರ ಶೆಟ್ಟಿ, ವಸುಂಧರಾ ಶೆಟ್ಟಿ ದಂಪತಿ ಆತ್ಮಹತ್ಯೆ

ಕಾಪು ಲೀಲಾಧರ ಶೆಟ್ಟಿ, ವಸುಂಧರಾ ಶೆಟ್ಟಿ ದಂಪತಿ ಆತ್ಮಹತ್ಯೆ

ಉಡುಪಿ: ಸಮಾಜ ಸೇವಕ, ರಾಜಕೀಯ ಮುಖಂಡ, ನಾಟಕಕಾರ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ದಂಪತಿ ಜೊತೆ ಜೊತೆಯಾಗಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಜಿಲ್ಲೆಯ ಕಾಪುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಇವರಿಬ್ಬರು ಮಂಗಳವಾರ ರಾತ್ರಿ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಲೀಲಾಧರ ಶೆಟ್ಟಿಯವರು ಕಾಪುವಿನಲ್ಲಿ ರಂಗ ತರಂಗ ಎಂಬ ನಾಟಕ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. ಸದಾ ಸಮಾಜಪರ ಕಾಳಜಿ ಹೊಂದಿದ್ದ ಅವರು ಯಾವುದೇ ಕ್ಷಣದಲ್ಲಿ ಕೂಡ ಅಶಕ್ತರ ನೆರವಿಗೆ ಧಾವಿಸುತ್ತಿದ್ದರು. ಇವರು ಒಂದು ಬಾರಿ ಕಾಪು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೂ ಸ್ಪರ್ಧಿಸಿದ್ದರು. ಆದರೂ ಇತ್ತೀಚೆಗೆ ಹಣಕಾಸಿನ ತೊಂದರೆ ಕೂಡ ಹೊಂದಿದ್ದರು ಎನ್ನಲಾಗಿದೆ.

ಕೌಟುಂಬಿಕ‌ ಕಾರಣದಿಂದ ಮನನೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES
- Advertisment -
Google search engine

Most Popular