ಮಂಡ್ಯ: ಸೇವಾ ಖಾಯಂಗೆ ಒತ್ತಾಯಿಸಿ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಧರಣಿ ಮುಂದುವರೆದಿದೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಯುತ್ತಿದ್ದು, ಶಿಕ್ಷಕರು ತರಗತಿ ಬಹಿಷ್ಕರಿಸಿ ಧರಣಿ ಕುಳಿತಿದ್ದಾರೆ.
ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿರುವ ಶಿಕ್ಷಕರು, ಸರ್ಕಾರ ನಿರಂತರವಾಗಿ ಅತಿಥಿ ಉಪನ್ಯಾಸಕರಿಗೆ ಅನ್ಯಾಯ ಮಾಡಿದೆ. ಕಳೆದ ಬಾರಿ ಸಿದ್ದರಾಮಯ್ಯ ಮಾತು ಕೊಟ್ಟು ಸರ್ಕಾರ ರಚನೆ ಬಳಿಕ ಮರೆತು ಬಿಟ್ಟಿದ್ದಾರೆ. ತಕ್ಷಣವೇ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿದ್ದಾರೆ.