Wednesday, April 23, 2025
Google search engine

Homeಅಪರಾಧಕಬ್ಬಿನ ಟ್ರ್ಯಾಕ್ಟರ್-ಬೈಕ್ ಡಿಕ್ಕಿ: ಇಬ್ಬರು ಯುವಕರು ಸಾವು

ಕಬ್ಬಿನ ಟ್ರ್ಯಾಕ್ಟರ್-ಬೈಕ್ ಡಿಕ್ಕಿ: ಇಬ್ಬರು ಯುವಕರು ಸಾವು

ವಿಜಯಪುರ: ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಬಲೇಶಶ್ವರ ತಾಲೂಕಿನಲ್ಲಿ ಜರುಗಿದೆ.

ಬಬಲೇಶ್ವರ ತಾಲೂಕಿನ ಎಸ್.ಎಚ್.ಸಂಗಾಪುರ ಕ್ರಾಸ್ ಬಳಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಇಬ್ಬರು ಯುವಕರಿದ್ದ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರಿಯಲ್ಲಿದ್ದ ಇಬ್ಬರು ಯುವಕರಲ್ಲಿ ಓರ್ವ ಟ್ರ್ಯಾಕ್ಟರ್ ಗಾಲಿಯ ಅಡಿಯಲ್ಲೇ ಸಿಲುಕಿದ್ದರೆ, ಮತ್ತೊಬ್ಬ ಪಕ್ಕದಲ್ಲಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ ಮೃತ ಯುಕವರು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದವರು ಎಂಬ ಮಾಹಿತಿ ಇದ್ದು, ಮೃತರ ಹೆಸರು, ವಿಳಾಸ ತಿಳಿದು ಬಂದಿಲ್ಲ.

ಅಪಘಾತದ ಸುದ್ದಿ ತಿಳಿಯುತ್ತಲೇ ಬಬಲೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪಿಎಸ್‍ಐ ಅಶೋಕ ನಾಯಕ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular