ಚಿತ್ರದುರ್ಗ: ಪಾನ್-ಇಂಡಿಯಾ ರೆಸ್ಕ್ಯೂ ಅಂಡ್ ರಿಹ್ಯಾಬಿಲಿಟೇಶನ್ ಕ್ಯಾಂಪೈನ್ ಆಫ್ ಚೈಲ್ಡ್ ಅಂಡ್ ಅಡೋಲ್ಸೆಂಟ್ ರಕ್ಷಣಾ ಕಾರ್ಯಾಚರಣೆ ಪ್ರಯುಕ್ತ ಬುಧವಾರ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ವ್ಯಾಪ್ತಿಯಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರವಸ್ಥೆ ಕಾರ್ಮಿಕ ನಿಷೇಧ 1986ರ ಕಾಯಿದೆ ಅಡಿ ಅನಿರೀಕ್ಷಿತ ದಾಳಿ ಕೈಗೊಳ್ಳಲಾಯಿತು.
ದಾಳಿ ಸಂದರ್ಭದಲ್ಲಿ ವಿವಿಧ ವಾಣಿಜ್ಯ ಸಂಸ್ಥೆಗಳಾದ ಹೋಟೆಲ್, ಗ್ಯಾರೇಜ್, ಬೇಕರಿ ಅಂಗಡಿಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿ ಸ್ಟಿಕರ್ಸ್ ಹಾಗೂ ಕರಪತ್ರಗಳನ್ನು ಸಂಸ್ಥೆಯ ಮಾಲೀಕರಿಗೆ ನೀಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ತಂಡದಲ್ಲಿ ಹಿರಿಯೂರು ಕಾರ್ಮಿಕ ನಿರೀಕ್ಷಕ ಅಲ್ಲಾಬಕ್ಷ್, ಜಿಲ್ಲಾ ಬಾಲಕಾರ್ಮಿಕ ಯೋಜನೆ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಟಿ.ತಿಪ್ಪೇಸ್ವಾಮಿ, ಜವನಗೊಂಡನಹಳ್ಳಿ ಆರಕ್ಷಕ ಠಾಣೆ ಪೊಲೀಸ್ ಸಿಬ್ಬಂದಿ ಈರಣ್ಣ ಸಾಲೋಟಗಿ ಇದ್ದರು.