ಮೈಸೂರು: ಪ್ರತಿ ವರ್ಷದಂತೆ ಈ ವರ್ಷವು ಸಹ ಎಸ್‌ಎಸ್‌ಎಲ್‌ಸಿ , ಪಿಯುಸಿ ಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಪ್ರಶಸ್ತಿ ಪ್ರಧಾನ ಡಿ.೧೭ ರಂದು ಮೈಸೂರು ಜಿಲ್ಲಾ ಉಪ್ಪಾರ ನೌಕರರ , ವೃತ್ತಿಪರರ ಸಂಘದಿಂದ ಆಯೋಜಿಸಲಾಗಿದೆ.
ಇಂದು ಗುರುವಾರ ಸುದ್ದಿಗೋಷ್ಠಿ ಸಂಘದ ಪ್ರಧಾನ ಕಾರ್ಯದರ್ಶಿ ಲಿಂಗಣ್ಣ ಮಾತನಾಡಿದ ಅವರು ೩೧೦ ಮಂದಿ ವಿದ್ಯಾರ್ಥಿಗಳಿಗೆ ಸಾವಿರ ರೂ. ನಗದು ಸನ್ಮಾನ ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುವುದು. ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಭಾಗದ ಜಿಲ್ಲೆಗಳಿಂದ ಸಮುದಾಯದ ಜನರು ಭಾಗವಹಿಸುವರು. ಕಲಾಮಂದಿರದಲ್ಲಿ ನಡೆಯುವ ಅಂದಿನ ಕಾರ್ಯಕ್ರಮವನ್ನು ಶಾಸಕ ಪುಟ್ಟರಂಗಶೆಟ್ಟಿ ಉದ್ಘಾಟಿಸಲಿದ್ದು, ಚಿತ್ರದುರ್ಗದ ಭಗೀರಥ ಪೀಠದ ಶ್ರೀ ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ, ಮಂಡ್ಯ ಜಿಲ್ಲೆಯ ಸರಗೂರು ಮಠದ ಶ್ರೀ ಮಹದೇವಸ್ವಾಮೀಜಿ ಸಾನಿಧ್ಯವಹಿಸುವರು. ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಗಿರೀಶ್ ಭಗೀರಥ ಮಹರ್ಷಿ ಅವರ ಭಾವಚಿತ್ರ ಅನಾವರಣ ಮಾಡಲಿದ್ದು ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಟಿ.ಆರ್.ಶಿವರಾಜು, ಗೌ.ಅಧ್ಯಕ್ಷ ಜವರಶೆಟ್ಟಿ, ಖಜಾಂಚಿ ಗೋವಿಂದರಾಜು, ಗೌ.ಸಲಹೆಗಾರ ಮಹದೇವ ಶೆಟ್ಟಿ ಇದ್ದರು.