ರಾಜಸ್ಥಾನ: ರಾಜಸ್ಥಾನ ದ ನೂತನ ಮುಖ್ಯಮಂತ್ರಿಯಾಗಿ ಭಜನ್‌ಲಾಲ್ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು. ಬಳಿಕ ಭಜನ್‌ಲಾಲ್ ಶರ್ಮಾ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ನಿರ್ಧರಿಸಿತ್ತು.
ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಅವರನ್ನು ರಾಜ್ಯದ ಉಪ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ.
ರಾಜಸ್ಥಾನದ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ರಾಜ್ಯದ ನೂತನ ಮುಖ್ಯಮಂತ್ರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ಏಕನಾಥ್ ಶಿಂಧೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ರಾಜಸ್ಥಾನ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ರಾಮ್ ನಿವಾಸ್ ಬಾಗ್‌ನ ಲ್ಲಿರುವ ಆಲ್ಬರ್ಟ್ ಹಾಲ್ ನ ಹೊರಗೆ ನಡೆಯಿತು. ಬಿಜೆಪಿಯ ರಾಜ್ಯ ಪದಾಧಿಕಾರಿಗಳಿಗೆ ಈ ಎಲ್ಲ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಬೇರೆ ಬೇರೆ ಜವಾಬ್ದಾರಿಗಳನ್ನು ವಹಿಸಲಾಗಿದೆ.