ಬೆಳಗಾವಿ: ತಾಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣದ ಮಾಹಿತಿ ಪಡೆಯಲು ಬೆಳಗಾವಿ ಜಿಲ್ಲಾಸ್ಪತ್ರೆಗೆ ಶನಿವಾರ ರಾಷ್ಟ್ರೀಯ ಮಹಿಳಾ ಆಯೋಗದ ತಂಡ ಭೇಟಿ ನೀಡಿ ಸಂತ್ರಸ್ತ ಮಹಿಳೆಗೆ ಸಾಂತ್ವನ ಹೇಳಿತು.
ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಕೊಂಗಡುಪ್ ನೇತೃತ್ವದ ತಂಡ ಭೇಟಿ ನೀಡಿದ್ದು, ಆರೋಗ್ಯ ವಿಚಾರಿಸಿತು. ಜತೆಗೆ ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿತು.
ಜಿಲ್ಲಾಧಿಕಾರಿ ನಿತೇಶ ಪಾಟೀಲ, ಪೊಲೀಸ್ ಕಮಿಷನರ್ ಎಸ್.ಎನ್.ಸಿದ್ದರಾಮಪ್ಪ, ಡಿಸಿಪಿ ರೋಹನ್ ಜಗದೀಶ, ಎಸಿಪಿ ಎಸಿಪಿ ನಾರಾಯಣ ಭರಮನಿ ಸೇರಿದಂತೆ ಇತರರು ಇದ್ದಾರೆ.