ಮಡಿಕೇರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಡಿ. ೧೮ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಡಿ. ೧೮ ರಂದು ಬೆಳಗ್ಗೆ ೧೦.೩೦ ಗಂಟೆಗೆ ಕುಶಾಲನಗರದ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ ೧೨ ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.