Sunday, April 20, 2025
Google search engine

Homeರಾಜ್ಯಸುದ್ದಿಜಾಲಮಂಗಳೂರು:ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕಿ ವಿವಿಧ ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ, ಪರಿಶೀಲನೆ

ಮಂಗಳೂರು:ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕಿ ವಿವಿಧ ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ, ಪರಿಶೀಲನೆ

ಮಂಗಳೂರು (ದಕ್ಷಿಣ ಕನ್ನಡ):ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ನಿರ್ದೇಶಕರಾದ ಸಿಂಧು ಬಿ.ರೂಪೇಶ್ ಅವರು ಶನಿವಾರ ಮಂಗಳೂರು ನಗರದ ವಿವಿಧ ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಮೊದಲು ಬಲ್ಮಠ ಮಹಿಳಾ ಪದವಿಪೂರ್ವ ಕಾಲೇಜಿಗೆ ಆಗಮಿಸಿದ ಅವರು, ಕಾಲೇಜಿನ ವಿವಿಧ ವಿಭಾಗಗಳಿಗೆ ಭೇಟಿ ನೀಡಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಕಾಲೇಜಿನ ಶೈಕ್ಷಣಿಕ ಸಾಧನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ನಂತರ ನಗರದ ಬಿ.ಎಡ್. ಕಾಲೇಜು ಆವರಣದಲ್ಲಿರುವ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ, ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ನಿರ್ಮಾಣವಾಗುತ್ತಿರುವ ಕಟ್ಟಡ ಪರಿಶೀಲನೆ ಮಾಡಿ ನಂತರ ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳ ಕುಂದು ಕೊರತೆಗಳನ್ನು ಕೇಳಿದರು.
ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು, ಭವಿಷ್ಯದ ಬಗ್ಗೆ ಮುಂದೆ ಆಯ್ಕೆ ಮಾಡಿಕೊಳ್ಳುವ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ವಿಚಾರಿಸಿದರು.
ಈ ಸಂಧರ್ಭದಲ್ಲ್ಲಿ ಶಾಲಾ ಪದವಿಪೂರ್ವ ಇಲಾಖೆಯ ಉಪನಿರ್ದೇಶಕರಾದ ಸಿ.ಡಿ.ಜಯಣ್ಣ, ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಯಾನಂದ ಸುವರ್ಣ, ಕಾರ್ಯದರ್ಶಿ ಅನುಸೂಯ, ಪ್ರಾಂಶುಪಾಲರ ಸಂಘದ ಪದಾಧಿಕಾರಿ ಸೋಮಶೇಖರ್ ನಾಯಕ್, ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್, ಉಪನ್ಯಾಸಕ ಚಂದ್ರನಾಥ್ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular