Monday, April 21, 2025
Google search engine

Homeಸ್ಥಳೀಯಡಿ. ೨೦ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಡಿ. ೨೦ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಮೈಸೂರು: ನಗರದ ಸ್ವಚ್ಛತೆಗೆ ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಡಿ. ೨೦ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಸೇವಕ, ಗೋಪಾಲಗೌಡ ಮೆಮೋರಿಯಲ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಶುಶ್ರುತ್ ಗೌಡ ತಿಳಿಸಿದರು.

ಇಂದು ಸೋಮವಾರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರನ್ನು ಸ್ವಚ್ಛವಾಗಿಡಲು ಶ್ರಮಿಸುತ್ತಿರುವ ಪೌರಕಾರ್ಮಿಕರು ಕೆಲಸದ ಭರದಲ್ಲಿ ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಲು ಸಾಧ್ಯವಾಗುತ್ತಿಲ್ಲ. ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ವಿ.ಆರ್. ಟ್ರಸ್ಟ್ ವತಿಯಿಂದ ಪ್ರೊಜೆಕ್ಟ್ ಅಡಿ ನಗರದ ಟೌನ್ ಹಾಲ್‌ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಪೌರಕಾರ್ಮಿಕರ ದಿನವಾದ ಡಿ. ೨೦ರಂದು ಹಮ್ಮಿಕೊಳ್ಳಲಾಗಿದೆ.

ಯಂದು ಪೌರಕಾರ್ಮಿಕರಿಗಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುವುದಾಗಿ ಭರವಸೆ ನೀಡಿದ್ದೇವು. ನಾವು ಕೊಟ್ಟ ಮಾತಿನಂತೆ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಲಾಗಿದೆ. ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ೨೫೦೦ಕ್ಕೂ ಹೆಚ್ಚು ಪೌರಕಾರ್ಮಿಕರು ನಮ್ಮ ಆರೋಗ್ಯ ಶಿಬಿರದಲ್ಲಿ ಭಾಗವಹಿಸಿ ಅದರ ಸದುಪಯೋಗ ಪಡೆದಕೊಳ್ಳಬೇಕೆಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

RELATED ARTICLES
- Advertisment -
Google search engine

Most Popular